Sunday, September 6, 2026
Sunday, September 6, 2026

ಜಿಲ್ಲೆಗೊಂದು ಗೋಶಾಲೆ ಸ್ಥಾಪನೆ ನಿರ್ಧಾರ ಸ್ವಾಗತಾರ್ಹ: ಯಶ್ಪಾಲ್ ಸುವರ್ಣ

ಜಿಲ್ಲೆಗೊಂದು ಗೋಶಾಲೆ ಸ್ಥಾಪನೆ ನಿರ್ಧಾರ ಸ್ವಾಗತಾರ್ಹ: ಯಶ್ಪಾಲ್ ಸುವರ್ಣ

Date:

ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಸ್ಥಾಪನೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಮೊದಲ ಹಂತದಲ್ಲಿ ರೂ.15 ಕೋಟಿ ಅನುದಾನ ಒದಗಿಸಿದ ರಾಜ್ಯ ಸರಕಾರದ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ಗೋಸಂಪತ್ತಿನ ರಕ್ಷಣೆಗಾಗಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಅಧಿನಿಯಮ ಜಾರಿಗೊಳಿಸಿರುವ ರಾಜ್ಯ ಸರಕಾರ, ಇದೀಗ ಪ್ರತಿ ಜಿಲ್ಲೆಗೊಂದರಂತೆ ಗೋಶಾಲೆಗಳನ್ನು ಸ್ಥಾಪಿಸುವ ಮೂಲಕ ಗೋ ರಕ್ಷಣೆ ಕೇವಲ ಮಾತಲ್ಲ ಅದು ನಮ್ಮ ಸಂಕಲ್ಪ ಎಂಬ ಬದ್ಧತೆಯನ್ನು ನಿರೂಪಿಸಿದೆ.

ಗೋ ಶಾಲೆಗಳ ನಿರ್ಮಾಣಕ್ಕೆ ರಾಜ್ಯಾದ್ಯಂತ ನಿವೇಶನಗಳನ್ನು ಗುರುತಿಸಿರುವ ಪಶು ಸಂಗೋಪನ ಇಲಾಖೆ ಶೀಘ್ರವಾಗಿ ಗೋಶಾಲೆ ನಿರ್ಮಾಣಕ್ಕೆ ಮುಂದಾಗಲಿ ಹಾಗೂ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಪಶು ಸಂಗೋಪನೆ ಇಲಾಖೆ ಸಚಿವರಾದ ಪ್ರಭು ಬಿ ಚೌಹಾಣ್ ಹಾಗೂ ಸಚಿವ ಸಂಪುಟದ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!