Monday, September 7, 2026
Monday, September 7, 2026

ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗ ಮತ್ತು ಆರ್ಥಿಕ ದುರ್ಬಲ ವರ್ಗಕ್ಕೆ ಮೀಸಲಾತಿ: ಯಶ್ಪಾಲ್ ಸುವರ್ಣ ಅಭಿನಂದನೆ

ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗ ಮತ್ತು ಆರ್ಥಿಕ ದುರ್ಬಲ ವರ್ಗಕ್ಕೆ ಮೀಸಲಾತಿ: ಯಶ್ಪಾಲ್ ಸುವರ್ಣ ಅಭಿನಂದನೆ

Date:

ಉಡುಪಿ: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಶೇ. 27 ಮತ್ತು ಆರ್ಥಿಕ ದುರ್ಬಲ ವರ್ಗಕ್ಕೆ ಶೇ. 10 ಮೀಸಲಾತಿಯ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರ‍ೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಈಗಾಗಲೇ ಮಹತ್ವದ ಬದಲಾವಣೆ ತಂದಿರುವ ಕೇಂದ್ರ ಸರಕಾರ ಹಿಂದುಳಿದ ವರ್ಗಗಳ ಮತ್ತು ಆರ್ಥಿಕ ದುರ್ಬಲ ವರ್ಗಕ್ಕೆ ಮೀಸಲಾತಿ ನೀಡುವ ಮೂಲಕ ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿದೆ.

ಕೇಂದ್ರ ಸರಕಾರದ ಈ ಐತಿಹಾಸಿಕ ನಿರ್ಧಾರದಿಂದ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ಈ ಮೀಸಲಾತಿ ಅನ್ವಯವಾಗಲಿದ್ದು, ಹಿಂದುಳಿದ ವರ್ಗಗಳ ಸುಮಾರು 4000 ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕ ದುರ್ಬಲ ವರ್ಗದ ಸುಮಾರು 1550 ವಿದ್ಯಾರ್ಥಿಗಳಿಗೆ ನೆರವಾಗಲಿದೆ.

ಈ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರಾದ ಅಮಿತ್ ಶಾ, ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್, ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ ಬಿಜೆಪಿ ರಾಷ್ಟ್ರ‍ೀಯ ಅಧ್ಯಕ್ಷರಾದ ಜೆ ಪಿ ನಡ್ಡಾ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಹಾಗೂ ಕೇಂದ್ರ ಸರಕಾರದ ಸಚಿವ ಸಂಪುಟದ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಯಶ್ಪಾಲ್ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!