Sunday, October 18, 2026
Sunday, October 18, 2026

ಪೊಲೀಸರ ಪರ ಬೀದಿಗಿಳಿದು ಹೋರಾಡಲು ಸಿದ್ಧ: ಯಶ್ಪಾಲ್ ಸುವರ್ಣ

ಪೊಲೀಸರ ಪರ ಬೀದಿಗಿಳಿದು ಹೋರಾಡಲು ಸಿದ್ಧ: ಯಶ್ಪಾಲ್ ಸುವರ್ಣ

Date:

ಭಾರತೀಯ ಯೋಧರ ಸಾವನ್ನು ಬಯಸಿ ಪಾಕಿಸ್ತಾನಿ ಸೈನಿಕರ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ದೇಶದ್ರೋಹಿಯನ್ನು ಕಾಂಗ್ರೆಸ್ ತನ್ನ ಕಾರ್ಯಕರ್ತ ಎಂದು ಸಮರ್ಥಿಸುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ವಿಷಾದ ವ್ಯಕ್ತಪಡಿಸಿದ್ದಾರೆ.

ಕಾರ್ಕಳದ ಹಿರ್ಗಾನ ನಿವಾಸಿ ರಾಧಾಕೃಷ್ಣ ಎಂಬಾತ ಕೆಲ ತಿಂಗಳ ಹಿಂದೆ ಭಾರತೀಯ ಸೇನೆಯ ವಿರುದ್ಧ ಅಪಮಾನಕಾರಿ ಬರಹವನ್ನು ಬರೆದು ತಲೆಮರೆಸಿಕೊಂಡಿದ್ದ. ಮೊನ್ನೆ ಆತನನ್ನು ಪೊಲೀಸರು ಕರೆದು ವಿಚಾರಣೆ ನಡೆಸಿದ್ದಾರೆ. ದೇಶ ಕಾಯುವ ಸೈನಿಕರ ಸಾವನ್ನು ಬಯಸುವ ಇಂತಹ ಹೀನ ಮನಸ್ಥಿತಿಯ ವ್ಯಕ್ತಿಯನ್ನು ವಿಚಾರಣೆ ಮಾಡದೆ ಮತ್ತೇನು ಠಾಣೆಯಲ್ಲಿ ಕೂರಿಸಿ ಮಂಗಳಾರತಿ ಎತ್ತಬೇಕಿತ್ತೇ? ಈತನಿಗೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾದ ಸಂಗತಿ.

ವಿಚಾರಣೆ ಮುಗಿದ ಬಳಿಕ ನೆಟ್ಟಗೆ ನಡೆದುಕೊಂಡು ಮನೆಗೆ ಹೋದವನನ್ನು ಕಾಂಗ್ರೆಸ್ ನಾಯಕರೇ ಆಸ್ಪತ್ರೆಗೆ ಸೇರಿಸಿ ಪೋಲೀಸರ ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿದೆ. ಇಂತಹ ವಿಕೃತ ವ್ಯಕ್ತಿಯ ಸಮರ್ಥನೆಗೆ ಸಿದ್ದರಾಮಯ್ಯ ಮೊದಲಾದ ರಾಜಕಾರಣಿಗಳು ಮುಂದಾಗಿದ್ದು ಇದರಲ್ಲಿ ಯಾವುದೇ ಅಚ್ಚರಿ ಇಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಎ ವಿರೋಧಿ ದಂಗೆಕೋರರಿಗೂ, ಡಿಜೆ ಹಳ್ಳಿಯ ದುಷ್ಕರ್ಮಿಗಳಿಗೂ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಸಿದ್ದರಾಮಯ್ಯರ ಈ ಚಟುವಟಿಕೆಗಳನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು ಜನರು ತಕ್ಕ ಪಾಠ ಕಲಿಸಲಿದ್ದಾರೆ.

ಕಾರ್ಕಳ ನಗರ ಠಾಣಾ ಪೊಲೀಸ್ ಅಧಿಕಾರಿ ಅವರಿಗೆ ಸಂವಿಧಾನ ವ್ಯವಸ್ಥೆಯ ಮೇಲೆ ನಂಬಿಕೆ ಇರುವ ಪ್ರತಿಯೊಬ್ಬ ನಾಗರಿಕರ ಬೆಂಬಲವಿದೆ. ವಿನಾಕಾರಣ ಪೊಲೀಸ್ ಅಧಿಕಾರಿಗಳ ತೇಜೋವಧೆಗೆ ಮುಂದಾದರೆ ಕಾಂಗ್ರೆಸ್ ಪುಡಾರಿಗಳಿಗೆ ಇದು ದುಬಾರಿಯಾಗುವ ಸಾಧ್ಯತೆ ಇದೆ. ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುವ ಕಾಂಗ್ರೆಸಿಗರ ವಿರುದ್ದ ಬೀದಿಗಿಳಿದು ಪ್ರತಿಭಟಿಸಲು ಸಿದ್ಧ ಎಂದು ಯಶ್ಪಾಲ್ ಸುವರ್ಣ ಅವರು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!