ಉಡುಪಿ: ಅಂತರಾಷ್ಟ್ರೀಯ ಯೋಗ ದಿನವನ್ನು ಜಿಲ್ಲೆಯ ಹಲವೆಡೆ ಅರ್ಥಪೂರ್ಣವಾಗಿ ಆಚರಿಸಲಾಯಿತು.
1. ಉಡುಪಿಯ ಶ್ರೀಕೃಷ್ಣ ಮಠ ರಾಜಾಂಗಣದಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪರ್ಯಾಯ ಕೃಷ್ಣಾಪುರ ಮಠ ಉಡುಪಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಯೋಗ ಶಿಕ್ಷಕ ಬಿರಾದರ್ ಯೋಗ ಪ್ರಾತ್ಯಕ್ಷಿಕೆ ನೀಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಜಿಲ್ಲಾ ಸಂಚಾಲಕ ಚಂದ್ರಶೇಖರ್ ಹಾಗೂ ಮತ್ತಿತರರು ಭಾಗವಹಿಸಿದ್ದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಸ್ವಾಗತಿಸಿದರು.
2. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉದ್ಘಾಟಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
3. ಜಿ.ಎಸ್.ಬಿ ಮಹಿಳಾ ಮಂಡಳಿ ಕಾರ್ಕಳ ವತಿಯಿಂದ ಯೋಗ ದಿನಾಚರಣೆ ನಡೆಯಿತು. ಸಂಸ್ಕಾರ ಸಂಘಟನೆ ಸೇವೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಮಂಗಳೂರು ನಗರ ಸಂಚಾಲಕರಾದ ಅಶೋಕ ಜೈನ್ ಯೋಗದ ಮಹತ್ವದ ಕುರಿತು ಮಾತನಾಡಿದರು. ಅಧ್ಯಕ್ಷೆ ದಿವ್ಯಾಡಿ ಪೈ ಸ್ವಾಗತಿಸಿ, ರಾಧಿಕಾ ಶೆಣೈ ಕಾರ್ಯಕ್ರಮ ನಿರೂಪಿಸಿ, ವಾರಿಜಾ ವಿ ಕಾಮತ್ ವಂದಿಸಿದರು.
4. ಸಾಣೂರು ಗ್ರಾಮ ಪಂಚಾಯತ್ ನ ಸುವರ್ಣ ಗ್ರಾಮೋಧಯ ಸೌಧದಲ್ಲಿ ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಸಂಘಟನೆ ಉಡುಪಿ, ಗ್ರಾಮ ಪಂಚಾಯತ್ ಸಾಣೂರು, ಹಾಗೂ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಯೋಗ ದಿನಾಚರಣೆ ನಡೆಯಿತು. ಮಾಜಿ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ, ಸಾಣೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಕರುಣಾಕರ್ ಎಸ್. ಕೋಟ್ಯಾನ್, ಸಾಣೂರು ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು ಎಂ. ಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಅರುಣಿ, ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಕುಮಾರ್, ಪ್ರಕಾಶ್ ಮಡಿವಾಳ ಉಪಸ್ಥಿತರಿದ್ದರು. ಯೋಗ ಗುರುಗಳಾದ ಬಾಲಕೃಷ್ಣ ರೆ.ಖ್ಯ ಯೋಗಾಸನದ ಮಾಹಿತಿ ನೀಡಿ ವಿವಿಧ ಆಸನಗಳ ಪ್ರದರ್ಶನ ನಡೆಸಿಕೊಟ್ಟರು. ಯುವಕ ಮಂಡಲದ ಅಧ್ಯಕ್ಷರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಯುವಕ ಮಂಡಲದ ಕಾರ್ಯದರ್ಶಿ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
5. ನೆಹರು ಯುವ ಕೇಂದ್ರ ಉಡುಪಿ, ಶ್ರೀ ದುರ್ಗಾಪರಮೇಶ್ವರೀ ಫ್ರಂಡ್ಸ್ ಕ್ಲಬ್ (ರಿ.) ಅಬ್ಬನಡ್ಕ ನಂದಳಿಕೆ ವತಿಯಿಂದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಲಲಿತಾ ಆಚಾರ್ಯ ಮತ್ತು ನಿಯಾ ಶೆಟ್ಟಿ ತರಬೇತಿ ನೀಡಿದರು. ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಸದಸ್ಯರಾದ ಪದ್ಮಶ್ರೀ ಪೂಜಾರಿ, ಮಂಜುನಾಥ ಆಚಾರ್ಯ, ಕೀರ್ತನ್ ಕುಮಾರ್ ಮೊದಲಾದವರಿದ್ದರು.
6. ಸಂತ ಮೇರಿ ಕಾಲೇಜು ಶಿರ್ವ, ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ನಡೆಯಿತು. ಪ್ರಭಾರ ಪ್ರಾಂಶುಪಾಲ ಪ್ರೊ. ವಿಠ್ಠಲ್ ನಾಯ್ಕ್ ಶುಭ ಹಾರೈಸಿದರು. ಎನ್.ಸಿ.ಸಿಯ ಬಿ ‘ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಕೆಡೆಟ್ ಮೋಹಿತ ಎನ್ ಸಾಲಿಯಾನ್, ಆಶಿಶ್ ಪ್ರಸಾದ್ , ಧೀರಜ್ ಆಚಾರ್ಯ, ರಿಯಾನ್ ಡಿಸೋಜಾ, ವಿನೋಲ್ ನೊರೊನ್ಹಾ, ಮಂಜುನಾಥ್ ಅಮರಾವಟಿ, ಶ್ರೇಯಸ್ ವಿ ಕೋಟಿಯನ್, ದೀಪಕ್, ಸೂರಜ್, ರತನ್ ಕೋಟ್ಯಾನ್, ಶೆಟ್ಟಿ ತರುಣ್ ರಮೇಶ, ಜನಿಸಿಯಾ ನೊರೊನ್ಹಾ, ಎಲ್ರುಶಾ ಮಿಲಿನಾ ಡಿಸಾ, ರಿಯಾ ಆನ್ ನೆವಿಲ್ ಲೋಬೋ, ನವ್ಯ ಆಚಾರ್ಯ, ದೀಕ್ಷಾ ಪಿ ಸಾಲಿಯಾನ್, ದೀಪ್ತಿ, ರಕ್ಷಿತಾ, ನಿವೇದಿತ ಪೂಜಾರಿ, ರಿಯಾ ಸರೀನಾ ಡಿಸೋಜಾ, ಸೆರಾ ಮಾತೆ ಮ್ಯಾಕ್ವಾನ್ ಇವರನ್ನು ಅಭಿನಂದಿಸಲಾಯಿತು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್, ಜೂನಿಯರ್ ಅಂಡರ್ ಆಫೀಸರ್ ಹರ್ಷಿತಾ, ಸುರಕ್ಷಾ ಉಪಸ್ಥಿತರಿದ್ದರು. ಕ್ಯಾಡೆಟ್ಗಳಾದ ಅನುಪ್ ನಾಯಕ್ ಹಾಗೂ ಅಲಿಸ್ಟರ್ ಸುಜಾಯ್ ಡಿಸೋಜಾ ಸಹಕರಿಸಿದರು. ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ ಸ್ವಾಗತಿಸಿ, ಕೆಡೆಟ್ ಸುಶ್ಮಿತಾ ಎಸ್ ಅಮೀನ್ ವಂದಿಸಿದರು. ಕೆಡೆಟ್ ಶೆಟ್ಟಿಗಾರ್ ಹೇಮಶ್ರೀ ಸುದರ್ಶನ್ ಕಾರ್ಯಕ್ರಮವನ್ನು ನಿರೂಪಿಸಿದರು.
7. ಚೈಲ್ಡ್ ಲೈನ್-1098 ಉಡುಪಿ, ಶ್ರೀ ಕೃಷ್ಣ ಬಾಲನಿಕೇತನ ಹಾಗೂ ಕುಕ್ಕಿಕಟ್ಟೆ ಖಾಸಗಿ ಅನುದಾನಿತ ಶಾಲೆ ಜಂಟಿಯಾಗಿ ಶ್ರೀಕೃಷ್ಣ ಬಾಲನಿಕೇತನ ಕುಕ್ಕಿಕಟ್ಟೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಚೈಲ್ಡ್ ಲೈನ್-1098 ಉಡುಪಿಯ ನಿರ್ದೇಶಕ ರಾಮಚಂದ್ರ ಉಪಾಧ್ಯಾಯರು, ಚಿತ್ಪಾಡಿ ಪತಂಜಲಿ ಸಂಸ್ಥೆಯ ಸದಾನಂದ ರಾವ್, ಶಿವಪ್ರಸಾದ ರಾವ್ ರವೀಂದ್ರನಾಥ್ ನಾಯಕ್, ಚೈಲ್ಡ್ ಲೈನ್-1098 ಉಡುಪಿಯ ಸಿಬ್ಬಂದಿಗಳು, ಕುಕ್ಕಿಕಟ್ಟೆ ಅನುದಾನಿತ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ವಿದ್ಯಾರತ್ನ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
8. ಉಡುಪಿ ಶ್ರೀ ಕೃಷ್ಣ ಮಠದ ಎದುರು ಯೋಗ ದಿನಾಚರಣೆ ಪ್ರಯುಕ್ತ ಜೆಸಿಐ ಹಾಗೂ ಎಸ್‍ಡಿಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿಗಳು ವಿವಿಧ ಆಸನಗಳನ್ನು ನಡೆಸಿದರು. ಶ್ರೀಕೃಷ್ಣಮಠ, ಪರ್ಯಾಯ ಕೃಷ್ಣಾಪುರ ಮಠ, ಉಡುಪಿ ನಗರಸಭೆ, ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಹಾಗೂ ವಿಜಯ ಕರ್ನಾಟಕ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಸಿಐ ಉಡುಪಿ ಸಿಟಿ ಅಧ್ಯಕ್ಷ ಡಾ.ವಿಜಯ್ ಬಿ. ನೆಗಳೂರು, ಜೆಸಿಐ ಉಡುಪಿ ಇಂದ್ರಾಳಿ ಇದರ ಅಧ್ಯಕ್ಷ ಕೀರ್ತೇಶ್, ಜೆಸಿಐ ಮಣಿಪಾಲ ಹಿಲ್ ಸಿಟಿ ಅಧ್ಯಕ್ಷ ಡಾ. ಗುರುಮೂರ್ತಿ, ಜೆಸಿಐ ಉಡುಪಿ ಸಿಟಿ ಮಾಜಿ ಅಧ್ಯಕ್ಷರಾದ ಉದಯ ನಾಯಕ್, ಜಗದೀಶ್ ಶೆಟ್ಟಿ, ರಾಘವೇಂದ್ರ ಪ್ರಭು ಕರ್ವಾಲು, ಕೆಮ್ಮಣ್ಣು ಆಯುರ್ವೇದ ವೈದ್ಯೆ ಡಾ. ಚಿತ್ರಾ ವಿಜಯ್ ನೆಗಳೂರು ಉಪಸ್ಥಿತರಿದ್ದರು.