Thursday, September 3, 2026
Thursday, September 3, 2026

ಜಿಲ್ಲಾಮಟ್ಟದ ಯುವ ವಿಜ್ಞಾನಿ ಸ್ಪರ್ಧೆ

ಜಿಲ್ಲಾಮಟ್ಟದ ಯುವ ವಿಜ್ಞಾನಿ ಸ್ಪರ್ಧೆ

Date:

ಉಡುಪಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ 9 ರಿಂದ 12 ನೇ ವರ್ಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಫೆಬ್ರವರಿ 9 ರಂದು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.

ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸ್ಫರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆಯುವ ವಿದ್ಯಾರ್ಥಿಗೆ 5,000 ರೂ ಹಾಗೂ ದ್ವಿತೀಯ ಬಹುಮಾನ ಪಡೆಯುವ ವಿದ್ಯಾರ್ಥಿಗೆ 3,000 ರೂ ನಗದು ಹಾಗೂ ಅಭಿನಂದನಾ ಪತ್ರ ನೀಡಲಾಗುವುದು.

ಜಿಲ್ಲಾ ಹಂತದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ 4 ಯುವ ವಿಜ್ಞಾನಿಗಳಿಗೆ ತಲಾ 10,000 ರೂ ನಗದು ಬಹುಮಾನ ಹಾಗೂ ಯುವ ವಿಜ್ಞಾನಿ ಪ್ರಶಸ್ತಿ ಪತ್ರ ನೀಡಲಾಗುವುದು.

ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಯ ರಾಜ್ಯ ಸಂಯೋಜಕಿ ಮೀನಾಕ್ಷಿ ಶಿವಾನಂದ ಕುಡಸೋಮಣ್ಣವರ ಮೊ.ನಂ: 7353960666, ಕ.ರಾ.ವಿ.ಪ ಕಚೇರಿ ಮೊ.ನಂ: 9008442557, 9483549159 ಅಥವಾ 9449530245 ಅನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!