ಕಾಪು: ಭಾರತ ಸರಕಾರ, ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಇವರ ಆಶ್ರಯದಲ್ಲಿ ಯುವ ಮಂಡಳ ಅಭಿವೃದ್ಧಿ ಕಾರ್ಯಕ್ರಮ 2021-22 ಇನ್ನಂಜೆ ಎಸ್.ವಿ. ಹೆಚ್. ಪ.ಪೂ. ಕಾಲೇಜು ದಾಸಭವನದಲ್ಲಿ ನಡೆಯಿತು.
ಎಸ್.ವಿ. ಹೆಚ್. ಪ.ಪೂ. ಕಾಲೇಜು ಇನ್ನಂಜೆ ಪ್ರಾಂಶುಪಾಲ ಪುಂಡರೀಕಾಕ್ಷ ಕೊಡಂಚ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಯುವಜನರು ತಮ್ಮಲ್ಲಿರುವ ಸಾಮರ್ಥ್ಯವನ್ನು ಯೋಗ್ಯ ರೀತಿಯಲ್ಲಿ ಬಳಸಿಕೊಂಡರೆ ರಾಷ್ಟ್ರನಿರ್ಮಾಣ ಪರಿಕಲ್ಪನೆ ಸಾಕಾರಗೊಳ್ಳುವುದು ಎಂದರು.
ನೆಹರು ಯುವ ಕೇಂದ್ರ ಉಡುಪಿ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿ’ಸೋಜ ಪ್ರಸ್ತಾವಿಕವಾಗಿ ಮಾತನಾಡಿ ನೆಹರು ಯುವ ಕೇಂದ್ರದ ಕುರಿತು ವಿಸ್ತ್ರತವಾಗಿ ಮಾತನಾಡಿದರು.
ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಅಧ್ಯಕ್ಷ ಉಮೇಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ.ಹೆಚ್ ಕನ್ನಡ ಮಾಧ್ಯಮ ಪ್ರೌಢಶಾಲೆ ಇನ್ನಂಜೆ ಮುಖ್ಯೋಪಾಧ್ಯಾಯ ನಟರಾಜ ಉಪಾಧ್ಯಾಯ ಮುಖ್ಯ ಅತಿಥಿಯಾಗಿ ಮಾತನಾಡಿದರು.
ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಸಂಪನ್ಮೂಲ ವ್ಯಕ್ತಿಯಾಗಿ ಗ್ರಾಮೀಣಾಭಿವೃದ್ಧಿಯಲ್ಲಿ ಯುವಜನರ ಪಾತ್ರದ ಕುರಿತು ವಿಶೇಷ ಉಪನ್ಯಾಸ ನೀಡಿದರು. ನೆಹರು ಯುವ ಕೇಂದ್ರ ಲೆಕ್ಕಾಧಿಕಾರಿ ವಿಷ್ಣುಮೂರ್ತಿ ಉಪಸ್ಥಿತರಿದ್ದರು.
ಇನ್ನಂಜೆ ಯುವಕ ಮಂಡಲದ ಕಾರ್ಯದರ್ಶಿ ಹರೀಶ್ ಪೂಜಾರಿ ಸ್ವಾಗತಿಸಿ, ಮಾಜಿ ಅಧ್ಯಕ್ಷ ಮಧುಸೂದನ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.