ಮಲ್ಪೆ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಬಿದ್ದ ಗದ್ದೆಗಳಲ್ಲಿ ಸಾವಯವ ಕೃಷಿ ಮಾಡಲಾಗಿದ್ದು, ಈ ಆಂದೋಲನಕ್ಕೆ ಅನೇಕ ಗದ್ದೆಯ ಭೂಮಾಲಕರು ಸಹಕರಿಸಿದ್ದು ಇಂದು ಕಡೆಕಾರ್ ಗ್ರಾಮದ ಸುಮಾರು 103 ಭೂ ಮಾಲಕರಿಗೆ ‘ಉಡುಪಿ ಕೇದಾರ ಕಜೆ’ಯನ್ನು ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ವಿತರಿಸಿ ಭೂ ಮಾಲಕರಿಗೆ ಅಭಿನಂದನೆ ಸಲ್ಲಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನಕರ್ ಬಾಬು, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ಕಡೆಕಾರ್ ಗ್ರಾಮ ಪಂಚಾಯತ್ ಸದಸ್ಯರು, ಕಂಡದ ಜೊಕುಲು ತಂಡದ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.