ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕ ಅರಣ್ಯ ಇಲಾಖೆ, ಜಿಲ್ಲಾ ಪಂಚಾಯತ್, ಸಾಮಾಜಿಕ ಅರಣ್ಯ ವಿಭಾಗ ಉಡುಪಿ, ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯ ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸಾಮಾಜಿಕ ಅರಣ್ಯ ವಿಭಾಗ ಕಛೇರಿಯಲ್ಲಿ ಕೃಷಿ ಅರಣ್ಯ ವಿಚಾರಗೋಷ್ಠಿಯನ್ನು ವಿಡಿಯೋ ಸಂವಾದದ ಮೂಲಕ ಸೋಮವಾರ ನಡೆಸಲಾಯಿತು.
ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬೆಂಗಳೂರು ಕೃಷಿ ಅರಣ್ಯ ರೈತರ ಮತ್ತು ತಂತ್ರಜ್ಞರ ಸಂಸ್ಥೆಯ ಕಾರ್ಯದರ್ಶಿ ಎ.ಎಂ.ಅಣ್ಣಯ್ಯ, ಕೃಷಿ ಅರಣ್ಯ ಪದ್ದತಿ ಮತ್ತು ಮಾದರಿಗಳ ಕುರಿತು, ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ದಿನಕರ ಅಡಿಗ, ಗೇರು ಕೃಷಿಯ ಬಗ್ಗೆ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳಾದ ಡಾ. ಚೈತನ್ಯ ಹೆಚ್ ಮತ್ತು ಡಾ.ಬಿ. ಧನಂಜಯ ಇವರು ತೋಟಗಾರಿಕೆ ಬೇಸಾಯದೊಂದಿಗೆ ಅರಣ್ಯ ಹಾಗೂ ಇತರ ಮಾಹಿತಿಗಳನ್ನು ರೈತರಿಗೆ ನೀಡಿದರು.
ಉಡುಪಿಯ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಪಿ.ಕೆ.ಎಂ ಇವರು ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಪಕ್ಷಿ ನೋಟವನ್ನು ಪರಿಚಯಿಸಿದರು. ಕುಂದಾಪುರ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ತುಳಸಿ ಅರಣ್ಯಇಲಾಖೆಯಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಮಾಹಿತಿಯನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಸಾಮಾಜಿಕ ಅರಣ್ಯ ವಿಭಾಗದ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಅರೇಕಲ್, ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮಂಗಳೂರು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್‌ಎಸ್. ನೇತಾಲ್‌ಕರ್ ಉಪಸ್ಥಿತರಿದ್ದರು.
ಕಾರ್ಕಳ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಸ್ವಾಗತಿಸಿದರು. ಉಡುಪಿಯ ಸಾಮಾಜಿಕ ಅರಣ್ಯ ವಲಯ ವಲಯ ಅರಣ್ಯಾಧಿಕಾರಿ ರವೀಂದ್ರ ಪಿ ವಂದಿಸಿದರು. ಕುಂದಾಪುರ ಸಾಮಾಜಿಕ ಅರಣ್ಯ ವಲಯದ ಉಪ ವಲಯ ಅರಣ್ಯಾಧಿಕಾರಿ ಸಂಗೀತಾ ಶೆಡ್ತಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ರೈತರಿಗೆ ಅರಣ್ಯ ಕೃಷಿಯ ಕುರಿತ ಮಾಹಿತಿಯ ಜೊತೆಗೆ ಅವರ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಲಾಯಿತು.