ಕಾಪು: ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಕಾಪುವಿನ ಮಲ್ಲಾರಿನಲ್ಲಿ ಸೋಮವಾರ ನಡೆದಿದೆ.
ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಗುಜರಿ ಅಂಗಡಿಗೆ ತರಲಾಗಿದ್ದ ಗ್ಯಾಸ್ ಸಿಲಿಂಡರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅದು ಸ್ಪೋಟಗೊಂಡ ಕಾರಣ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಓರ್ವರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಮೃತರನ್ನು ರಜಾಕ್ ಮಲ್ಲಾರ್, ನಿಯಾಝ್ ಮತ್ತು ರಜಬ್ ಎಂದು ಗುರುತಿಸಲಾಗಿದೆ.