Monday, January 20, 2025
Monday, January 20, 2025

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

Date:

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ ಪ್ರತಿಭೆಯು ಎತ್ತರಕ್ಕೆ ಏರಬೇಕು. ಸೋತವರು ಬೇಸರ ಪಡದೆ ಗೆದ್ದವರು ಬೀಗದೆ ಬಾಗಿ ನಡೆದು ತೋರುವ ಆದರ್ಶ ವ್ಯಕ್ತಿಗಳಾಗಬೇಕು ಎಂದು ಕಾರ್ಕಳದ ಎಸ್.ಎನ್.ವಿ. ಪ.ಪೂ.ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಎನ್. ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳನ್ನು ಗೌರವಿಸಿ ಮಾತನಾಡಿದರು. ಪಂದ್ಯಾಟದಲ್ಲಿ ಉಡುಪಿಯ ಎಂ.ಜಿ.ಎಂ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡವು ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದರೆ, ಕಾರ್ಕಳ ಜ್ಞಾನಸುಧಾ ಪ.ಪೂ.ಕಾ.ಬಾಲಕಿಯರ ತಂಡ ಹಾಗೂ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ.ಪೂ. ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನಿಯಾಗಿ ಮೂಡಿಬಂದವು ವಿಜೇತ ತಂಡಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಶುಭ ಹಾರೈಸಿ ಅಭಿನಂದಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್ ವಹಿಸಿದ್ದರು.

ವೇದಿಕೆಯಲ್ಲಿ ಉಡುಪಿ ಜಿಲ್ಲಾ ದೈ.ಶಿ.ಉಪನ್ಯಾಸಕ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ, ತಾ.ದೈ.ಶಿ.ಉಪನ್ಯಾಸಕ ಸಂಘದ ಮೇಲ್ವಿಚಾರಕ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರುಗಳಾದ ಸಾಹಿತ್ಯ ಹಾಗೂ ವಾಣಿ ಕೆ., ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ, ಸಂಸ್ಥೆಗಳ ದೈ.ಶಿಕ್ಷಣ ಉಪನ್ಯಾಸಕರಾದ ಅರುಣ್ ಕುಮಾರ್, ಕಿರಣ್ ಹಾಗೂ ರೇಷ್ಮಾ ಸಾಲಿಸ್ ಉಪಸ್ಥಿತರಿದ್ದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ಸ್ವಾಗತಿಸಿ, ನಿರೂಪಿಸಿದರು. ಕಾಲೇಜಿನ ದೈ.ಶಿ.ಉಪನ್ಯಾಸಕಿ ಸೌಜನ್ಯ ಹೆಗ್ಡೆ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!