ಉಡುಪಿ, ಜೂನ್ 20: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ : 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ, ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in/, ಜಿಲ್ಲಾ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಥವಾ ಸಹಾಯವಾಣಿ ಸಂಖ್ಯೆ: 080-8050370005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 76 ಬಡಗಬೆಟ್ಟು, ಬನ್ನಂಜೆ, ಉಡುಪಿ ಟೌನ್, ಕುಂದಾಪುರ, ನಿಟ್ಟೆ ಹಾಗೂ ಕಾರ್ಕಳ ಸೇರಿದಂತೆ ಒಟ್ಟು 8 ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ, ಹೊಸದಾಗಿ ಪ್ರವೇಶ ಬಯಸುವ ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2528884, ಮೊ.ನಂ: 9480843209, ಕುಂದಾಪುರ ದೂ.ಸಂಖ್ಯೆ: 08254-230609, 298089, ಮೊ.ನಂ: 9480843208 ಹಾಗೂ ಕಾರ್ಕಳ ದೂ.ಸಂಖ್ಯೆ: 08258-298134, 232133, ಮೊ.ನಂ: 9480843207 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
I am nikhitha