Thursday, December 12, 2024
Thursday, December 12, 2024

ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮʼ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಿ. ಉಮಾಪತಿ ಆಯ್ಕೆ

ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮʼ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಿ. ಉಮಾಪತಿ ಆಯ್ಕೆ

Date:

ಬೆಂಗಳೂರು, ಡಿ.8: ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ. ಉಮಾಪತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 2 ಲಕ್ಷ ರೂ. ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ಡಿ.ಉಮಾಪತಿ ಅವರ ಪರಿಚಯ

ಮಾರ್ಚ್ 18, 1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ. ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೇ ರ‍್ಯಾಂಕ್‌ನಲ್ಲಿ ಪಡೆದವರು.

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷ ಪರಿಣಾಮಕಾರಿ ವರದಿಗಳಿಂದ ಹೆಸರು ಗಳಿಸಿದವರು.

ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟ್‌ಗಳಲ್ಲಿನ ನದಿ, ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಪಡೆದಿದ್ದಾರೆ.

ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ, ರೈತ ಚಳವಳಿ, ವಿಜಯ ಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

’ದೆಹಲಿ ನೋಟ’, ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳಾಗಿವೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

ಉಡುಪಿ, ಡಿ.12: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ...

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರದಾನ

ಉಡುಪಿ, ಡಿ.12: ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ...

ಸ್ಕೌಟ್ಸ್ ಗೈಡ್ಸ್ ದೇಶಪ್ರಮಕ್ಕೆ ಮುನ್ನುಡಿ: ರಾಜೇಂದ್ರ ಭಟ್ ಕೆ

ವಿದ್ಯಾಗಿರಿ(ಮೂಡುಬಿದಿರೆ), ಡಿ.12: ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ರಾಷ್ಟ್ರ...

ಇಂದ್ರಾಳಿ ರುದ್ರಭೂಮಿಗೆ ಅಂತ್ಯಸಂಸ್ಕಾರ ಧಾಮ

ಉಡುಪಿ, ಡಿ.12: ಮಣಿಪಾಲ್ ಟೌನ್ ರೋಟರಿ ಕ್ಲಬ್ ನ ದಶಮಾನೋತ್ಸವ ಸಂದರ್ಭದಲ್ಲಿ...
error: Content is protected !!