Saturday, February 7, 2026
Saturday, February 7, 2026

ಮುಂದಿನ ಶೈಕ್ಷಣಿಕ ವರ್ಷದೊಳಗೆ 11,000 ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷದೊಳಗೆ 11,000 ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ

Date:

ಬೆಳಗಾವಿ, ಡಿ.20: ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ.

ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ಸರಿದೂರಿಸಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಅಲ್ಲದೇ ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಬೆಳಿಗ್ಗೆ ಬಿಸಿ ಹಾಲು, ಇದರೊಂದಿಗೆ ಮಿಕ್ಸ್ ರಾಗಿ ಮಾಲ್ಟ್, ಮಧ್ಯಾಹ್ನ ಬಿಸಿ ಊಟದೊಂದಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಉಚಿತವಾಗಿ ವಿತರಿಸಲಾಗುತ್ತಿದೆ.

ವಿದ್ಯಾವಿಕಾಸ ಯೋಜನೆಯಡಿ 1 ರಿಂದ 10ನೇ ತರಗತಿಯ ಮಕ್ಕಳಿಗೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಸಮವಸ್ತ್ರ ಸರಬರಾಜು ಮಾಡಲು ಮೊದಲನೇ ಜೊತೆ ಸಮವಸ್ತ್ರಕ್ಕಾಗಿ ರೂ.83.07 ಕೋಟಿ ಬಿಡುಗಡೆ ಮಾಡಲಾಗಿದ್ದು, ಎರಡನೇ ಜೊತೆ ಸಮವಸ್ತ್ರಕ್ಕಾಗಿ ರೂ. 80.66 ಕೋಟಿ ಲಭ್ಯವಿರುತ್ತದೆ ಎಂದು ಸಚಿವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!