Sunday, October 4, 2026
Sunday, October 4, 2026

ದೇಗುಲಗಳಿಗೆ 11,499 ಎಕರೆ ಸೇರ್ಪಡೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

ದೇಗುಲಗಳಿಗೆ 11,499 ಎಕರೆ ಸೇರ್ಪಡೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

Date:

ಬೆಂಗಳೂರು, ಜ.8: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಜರಾಯಿ ಇಲಾಖೆ ವತಿಯಿಂದ ದೇವಸ್ಥಾನಗಳ ಆಸ್ತಿಗಳ ದಾಖಲೆ ಮಾಹಿತಿ ಪರಿಶೀಲಿಸಲಾಯಿತು. ಈ ಸಂದರ್ಭ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬುದು ಗಮನಕ್ಕೆ ಬಂತು. ಕೂಡಲೇ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪಹಣಿ ಇಂಡೀಕರಣ ಪ್ರಕ್ರಿಯೆ ಆರಂಭಿಸಲು ಸೂಚಿಸಿದ್ದೆ. ಪರಿಣಾಮ ಎರಡು ವರ್ಷಗಳಲ್ಲಿ 11,499 ಎಕರೆ ವಿಸ್ತೀರ್ಣದ ದಾಖಲೆಗಳನ್ನು ಸರಿಪಡಿಸಲಾಗಿದೆ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಪ್ರತಿ ತಿಂಗಳೂ ಮುಜರಾಯಿ ಆಸ್ತಿಗಳ ಭೂಮಾಪನ, ದಾಖಲೆ ಪರಿಶೀಲನೆ, ತಿದ್ದುಪಡಿ, ಇಂಡೀಕರಣಕ್ಕೆ ಗುರಿ ನಿಗದಿಪಡಿಸಲಾಗಿದೆ. ಎಲ್ಲ ದೇವಾಲಯಗಳ ಆಸ್ತಿಗಳ ದಾಖಲೆಗಳನ್ನು ಸರಿಪಡಿಸಿ, ದೇವಸ್ಥಾನಗಳ ಹೆಸರಿಗೆ ಸರಿಯಾದ ಕ್ರಮದಲ್ಲಿ ದಾಖಲಿಸಲು ಇನ್ನೂ ಎರಡು ವರ್ಷ ಬೇಕಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!