Wednesday, January 22, 2025
Wednesday, January 22, 2025

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

Date:

ಬೆಂಗಳೂರು, ಮಾ.1: ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ. ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ವೇಗವರ್ದಕವಾಗಿ ಕೆಲಸ ಮಾಡುತ್ತದೆ. ಅಂಬೇಡ್ಕರ್ ಅವರು ರೂಪಿಸಿದ ಭಾರತೀಯ ಸಂವಿಧಾನದಲ್ಲಿ ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ. ಅಂಬೇಡ್ಕರ್ ಮತ್ತು ಅವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು. ಕುವೆಂಪು ಅವರ ವಿಶ್ವ ಮಾನವ ಸಂಸ್ಕೃತಿಯನ್ನು ವಿಶ್ವದಲ್ಲಿ ಹೆಚ್ಚೆಚ್ಚು ಪಾಲಿಸುವಂಥ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ವಿಶ್ವ ಸಿನಿಮಾಗಳು ನೆರವಾಗುತ್ತವೆ ಎಂದರು.

ಸಭಾಪತಿಗಳಾದ ಬಸವರಾಜ ಹೊರಟ್ಟಿ, ನಟ ಶಿವರಾಜ್ ಕುಮಾರ್, ಅಂತಾರಾಷ್ಟ್ರೀಯ ಚಿತ್ರೋತ್ಸವದ ರಾಯಭಾರಿಯಾದ ನಟ ಡಾಲಿ ಧನಂಜಯ್, ನಿರ್ದೇಶಕ ಜಬ್ಬಾರ್ ಪಟೇಲ್, ಚೆಕ್ ರಿಪಬ್ಲಿಕ್ ದೇಶದ ಚಿತ್ರ ವಿಮರ್ಷಕರಾದ ಮೆಯೆರಾ ಲಾಂಗೆರೊವಾ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕರಾದ ವಿದ್ಯಾಶಂಕರ್, ನಟಿ ಆರಾಧನಾ, ಚಲನಚಿತ್ರ ಅಕಾಡೆಮಿಯ ನಿಯೋಜಿತ ಅಧ್ಯಕ್ಷರಾದ ಸಾಧು ಕೋಕಿಲಾ, ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ.ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!