ಬೆಂಗಳೂರು, ಆ.5: ನಿರಂತರವಾಗಿ ಭೂಕುಸಿತವಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಪಶ್ಚಿಮಘಟ್ಟಗಳ ರಕ್ಷಣೆಗೆ ಕ್ರಮಕೈಗೊಳ್ಳಲು ಸಿದ್ದವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಜಿಲ್ಲೆಗಳೂ ಸೇರಿ ಪಶ್ಚಿಮ ಘಟ್ಟದ ಪ್ರದೇಶದಲ್ಲಿ 2015ರ ಬಳಿಕ ಆಗಿರುವ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ಗಳ ವಿರುದ್ಧ ಕ್ರಮ ಗೊಳ್ಳಬೇಕು. ಅಲ್ಲದೇ, ಅರಣ್ಯ ಒತ್ತುವರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.
ಪಶ್ಚಿಮ ಘಟ್ಟದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿದ ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳಿಗೆ ನೋಟಿಸ್ ನೀಡಿ ಕ್ರಮ ಜರುಗಿಸಲು ಕಾರ್ಯಪಡೆಗೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.