Monday, April 20, 2026
Monday, April 20, 2026

ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪಕಲಂಗಳಿಗೆ ತಿದ್ದುಪಡಿ

ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪಕಲಂಗಳಿಗೆ ತಿದ್ದುಪಡಿ

Date:

ಬೆಳಗಾವಿ, ಡಿ.14: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಕ್ರಮಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ.

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು.

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕರೆವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೂವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪರಿವರ್ತನೆ ಅಗತ್ಯವಿಲ್ಲ ಮತ್ತು ಕಂದಾಯ ನ್ಯಾಯಾಲಯ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಾದ್ಯಂತ ಎಲ್‌ಪಿಜಿ ಸರಬರಾಜು ಸ್ಥಿರ: ಸರ್ಕಾರ

ನವದೆಹಲಿ, ಏ.20: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಉಂಟಾದ ಅಡೆತಡೆಗಳ ನಡುವೆಯೂ, ದೇಶಾದ್ಯಂತ...

ಬಿ.ಬಿ. ಹೆಗ್ಡೆ ಕಾಲೇಜು: ಹ್ಯಾಕಥಾನ್ ಕಾರ್ಯಕ್ರಮ

ಕುಂದಾಪುರ, ಏ.20: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ

ಉಡುಪಿ, ಏ.19: ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗೆ ಶಾಸಕ ಯಶ್ಪಾಲ್ ಸುವರ್ಣ...

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

ಕಾಪು, ಏ.19: ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!