Tuesday, January 7, 2025
Tuesday, January 7, 2025

ಶಕ್ತಿ ಯೋಜನೆಯ ಬಗ್ಗೆ ತಿಳಿಯಲು ರಾಜ್ಯಕ್ಕೆ ಭೇಟಿ ನೀಡಿದ ಆಂಧ್ರಪ್ರದೇಶ ಸಚಿವರ ತಂಡ

ಶಕ್ತಿ ಯೋಜನೆಯ ಬಗ್ಗೆ ತಿಳಿಯಲು ರಾಜ್ಯಕ್ಕೆ ಭೇಟಿ ನೀಡಿದ ಆಂಧ್ರಪ್ರದೇಶ ಸಚಿವರ ತಂಡ

Date:

ಬೆಂಗಳೂರು, ಜ.5: ಆಂಧ್ರಪ್ರದೇಶ ಸರ್ಕಾರದ ಸಾರಿಗೆ, ಯುವಜನ & ಕ್ರೀಡಾ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಗೃಹ ಸಚಿವರಾದ ಅನಿತಾ ವಂಗಲಪುಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಗುಮ್ಮಿಡಿ ಸಂಧ್ಯಾರಾಣಿ ಹಾಗೂ ಸಾರಿಗೆ, ಆರ್ಥಿಕ ಇಲಾಖೆ ಅಧಿಕಾರಿಗಳು, ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡ ಬೆಂಗಳೂರಿಗೆ ಆಗಮಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ.ಎಸ್.ಆರ್.ಟಿ.ಸಿ) ಕೇಂದ್ರ ಕಛೇರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದರು. ‘ಶಕ್ತಿ’ ಯೋಜನೆಯನ್ನು ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಕುರಿತು ಅನೇಕ ಮಾಹಿತಿಗಳನ್ನು ಅವರು ಪಡೆದುಕೊಂಡರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆ ಕಾರ್ಯದರ್ಶಿಗಳು, ಹಾಗೂ ಕೆ.ಎಸ್.ಆರ್.ಟಿ.ಸಿ ಉಪಾಧ್ಯಕ್ಷರಾದ ರಿಜ್ವಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕಂಟೋನ್ಮೆಂಟ್ ಕಥೆಗಳು’ ಲೋಕಾರ್ಪಣೆ

ಬೈಂದೂರು, ಜ.7: ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡುವ ಸೈನಿಕರಿಂದಾಗಿ ನಾವು ನೆಮ್ಮದಿಯಿಂದ...

ಕೊಡಂಕೂರು: ರೂ. 2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಚಾಲನೆ

ಉಡುಪಿ, ಜ.7: ಉಡುಪಿ ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ...
error: Content is protected !!