Monday, February 24, 2025
Monday, February 24, 2025

52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ

52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ

Date:

ಬೆಂಗಳೂರು, ಆ.24: ಕರ್ನಾಟಕ ಲಲಿತಕಲಾ ಅಕಾಡೆಮಿಯು 52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ರೂ. 25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಪ್ರವೇಶ ಶುಲ್ಕ ರೂ. 300 ನಗದು ರೂಪದಲ್ಲಿ ಅಥವಾ ಡಿಡಿ ಮೂಲಕ ರಿಜಿಸ್ಟ್ರಾರ್‌, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪಾವತಿಸಬೇಕಾಗುತ್ತದೆ.

ಭರ್ತಿ ಮಾಡಿದ ಅರ್ಜಿ ನಮೂನೆಯ ಜೊತೆಗೆ ಕಲಾಕೃತಿಯ ಛಾಯಾಚಿತ್ರ ಹಾಗೂ ದಾಖಲಾತಿಗಳನ್ನು ಸೆಪ್ಟೆಂಬರ್‌ 21ರ ಒಳಗೆ ಇ-ಮೇಲ್‌ ವಿಳಾಸ [email protected] ಗೆ ಕಳುಹಿಸಬೇಕು. ರಿಜಿಸ್ಟ್ರಾರ್‌, ಕರ್ನಾಟಕ ಲಲಿತಕಲಾ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದಾಗಿದೆ. ಲಕೋಟೆಯ ಮೇಲೆ 52ನೇ ವಾರ್ಷಿಕ ಕಲಾ ಪ್ರದರ್ಶನಕ್ಕಾಗಿ ಅರ್ಜಿ ಎನ್ನುವುದನ್ನು ನಮೂದಿಸಿರಬೇಕು. ಹೆಚ್ಚಿನ ವಿವರಕ್ಕೆ https://lalitkala.karnataka.gov.in ಗೆ ಭೇಟಿ ನೀಡಿ. ಮಾಹಿತಿಗಾಗಿ ಸಂಪರ್ಕಿಸಿ 080 22480297

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!