Tuesday, October 27, 2026
Tuesday, October 27, 2026

ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾದರೆ ಸೂಕ್ತ ಕ್ರಮ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾದರೆ ಸೂಕ್ತ ಕ್ರಮ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Date:

ಬೆಂಗಳೂರು, ಅ.25: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ.

ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗುರ್ಮೆ ಫೌಂಡೇಶನ್: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ

ಕಾಪು, ಅ.26: ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆಯಲ್ಲಿ 25 ವರ್ಷ...

ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ, ಅ.26: ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ....
error: Content is protected !!