ಬೆಂಗಳೂರು, ಸೆ.3: ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದಿವೆ. ಇದರಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ಹೊರೆ ಆಗುವುದನ್ನು ತಪ್ಪಿಸಲು ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ನರ್ಸಿಂಗ್ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚನೆ

ನರ್ಸಿಂಗ್ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚನೆ
Date: