Home ಸುದ್ಧಿಗಳು ರಾಜ್ಯ ಶೀಘ್ರದಲ್ಲೇ ಮಧ್ಯಂತರ ಚುನಾವಣೆ: ಸಿದ್ಧರಾಮಯ್ಯ

ಶೀಘ್ರದಲ್ಲೇ ಮಧ್ಯಂತರ ಚುನಾವಣೆ: ಸಿದ್ಧರಾಮಯ್ಯ

489
0

ಬೆಂಗಳೂರು: ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ಜೊತೆಗಿನ ಮೂರು ದಿನಗಳ ನಿರಂತರ ಚರ್ಚೆ-ಸಮಾಲೋಚನೆಗಳ ನಂತರ ರಚನೆಯಾದ ರಾಜ್ಯದ ಸಚಿವ ಸಂಪುಟವನ್ನು ನೋಡಿದರೆ ಮುಖ್ಯಮಂತ್ರಿಗಳು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ. ಈಗಾಗಲೇ ಭುಗಿಲೆದ್ದಿರುವ ಭಿನ್ನಮತವನ್ನು ನೋಡಿದರೆ ಶೀಘ್ರದಲ್ಲಿಯೇ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ದಲಿತ ಸಮುದಾಯದ ಉದ್ಧಾರಕ್ಕೆ ಅವತಾರ ಎತ್ತಿ ಬಂದಂತೆ ಇತ್ತೀಚಿನ ದಿನಗಳಲ್ಲಿ ಮಾತನಾಡುತ್ತಿರುವ ಬಿಜೆಪಿ, ರಾಜ್ಯ ಸಚಿವ ಸಂಪುಟ ರಚನೆಯಲ್ಲಿ ದಲಿತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ರಾಜ್ಯದ ಶೇಕಡಾ 24ರಷ್ಟು ಜನಸಂಖ್ಯೆ ಇರುವ ಪರಿಶಿಷ್ಟ ಜಾತಿ-ಪಂಗಡ ಸಮುದಾಯಕ್ಕೆ ಕೇವಲ ನಾಲ್ಕು ಸಚಿವರನ್ನು ನೀಡಿ ಅನ್ಯಾಯ ಎಸಗಿದೆ. ನೂತನ ಸಚಿವ ಸಂಪುಟ ರಚನೆಯಲ್ಲಿ ಬಿಜೆಪಿಯೊಳಗಿರುವ ಭಿನ್ನಮತೀಯ ಗುಂಪುಗಳನ್ನು ತೃಪ್ತಿ ಪಡಿಸುವ ಸರ್ಕಸ್ ಕಾಣುತ್ತಿದೆಯೇ ಹೊರತು, ಜನಪರವಾದ ಸಮರ್ಥ ಆಡಳಿತ ನಡೆಸಬೇಕೆಂಬ ಸದುದ್ದೇಶ ಕಾಣುತ್ತಿಲ್ಲ. ಎಲ್ಲರನ್ನೂ ಓಲೈಸಲು ಪ್ರಯತ್ನ ನಡೆಸಿರುವ ಮುಖ್ಯಮಂತ್ರಿಗಳು ಯಾರಿಗೂ ಬೇಡದ ಒಲ್ಲದ ಕೂಸು ಆಗಿರುವಂತೆ ಕಾಣಿಸುತ್ತಿದೆ.

ಸಾಮರ್ಥ್ಯ, ಸಾಮಾಜಿಕ ನ್ಯಾಯ, ಪ್ರಾದೇಶಿಕ ಪ್ರಾತಿನಿಧ್ಯ, ಸ್ವಚ್ಛ ರಾಜಕಾರಣ ಮೊದಲಾದ ಯಾವ ಧನಾತ್ಮಕ ಅಂಶಗಳು ಹೊಸ ಸಚಿವ ಸಂಪುಟದಲ್ಲಿ ಕಾಣಿಸುತ್ತಿಲ್ಲ. ಇತ್ತೀಚೆಗಷ್ಠೇ ಮೊಟ್ಟೆ ಖರೀದಿ ಹಗರಣದಲ್ಲಿ ಆರೋಪಿಯಾಗಿರುವ ಶಶಿಕಲಾ ಜೊಲ್ಲೆ ಅವರಿಗೆ ಸಚಿವ ಸ್ಥಾನ ನೀಡಿರುವುದು ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಸಿದ್ಧರಾಮಯ್ಯ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.