Wednesday, February 18, 2026
Wednesday, February 18, 2026

ಭೀಮಣ್ಣ ಖಂಡ್ರೆ ಸಮಾಜದ ಏಳಿಗೆಗಾಗಿ ಅವಿರತವಾಗಿ ಶ್ರಮಿಸಿದ ಕಾಯಕಯೋಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಭೀಮಣ್ಣ ಖಂಡ್ರೆ ಸಮಾಜದ ಏಳಿಗೆಗಾಗಿ ಅವಿರತವಾಗಿ ಶ್ರಮಿಸಿದ ಕಾಯಕಯೋಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬೆಂಗಳೂರು, ಫೆ.16: ಬೆಂಗಳೂರಿನ ಗಾಯತ್ರಿ ವಿಹಾರದಲ್ಲಿ ಮಾಜಿ ಸಚಿವ, ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ದಿವಂಗತ ಭೀಮಣ್ಣ ಖಂಡ್ರೆ ಅವರ ನುಡಿನಮನ‌ ಕಾರ್ಯಕ್ರಮ ನಡೆಯಿತು. ನುಡಿನಮನ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರಳ ಸಜ್ಜನಿಕೆಯ ಮೂರ್ತರೂಪವಾಗಿದ್ದ ಭೀಮಣ್ಣ ಖಂಡ್ರೆಯವರು ಸಮಾಜದ ಏಳಿಗೆಗಾಗಿ ಅವಿರತವಾಗಿ ತಮ್ಮ ಬದುಕನ್ನು ಸವೆಸಿದ ಕಾಯಕಯೋಗಿ. ‘ಪರರ ಹಿತವೇ ಪರಮ ತಪ’ ಎಂದು ನಂಬಿ ಖಂಡ್ರೆಯವರು, ಜನಸೇವೆಯ ಸಂಕಲ್ಪವನ್ನು ತಮ್ಮ ಜೀವನದ ಧ್ಯೇಯವಾಗಿಸಿದ್ದರು.

ಬಸವಾದಿ ಶರಣರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, 102 ವರ್ಷಗಳ ಕಾಲ ಸಾಮಾಜಿಕ ಚಿಂತನೆಯೊಂದಿಗೆ ಸಾರ್ಥಕ ಜೀವನ ನಡೆಸಿದರು. ಜಾತಿ- ವರ್ಗ ಹಾಗೂ ಮೇಲು-ಕೀಳೆಂಬ ಬೇಧಭಾವಗಳನ್ನು ಕಟುವಾಗಿ ಟೀಕಿಸುತ್ತಿದ್ದ ಅವರು, 60ರ ದಶಕದಲ್ಲಿಯೇ ಅಸ್ಪೃಶ್ಯತೆಯ ವಿರುದ್ಧ ಧ್ವನಿ ಎತ್ತಿದರು.

ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಆಧಾರದ ಮೇಲೆ ಸಮಾಜ ನಿರ್ಮಾಣ ಮಾಡುವ ಕನಸನ್ನು ಕಂಡಿದ್ದ ಖಂಡ್ರೆಯವರು, ಬಡವ ಬಲ್ಲಿದರೂ ಗೌರವದ ಬದುಕನ್ನು ಜೀವಿಸಬೇಕೆಂದು ಹಂಬಲಿಸಿದ್ದರು ಎಂದು ಹೇಳಿದರು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿರಿಗೆರೆ ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು, ಕಿರಿಯ ಸ್ವಾಮೀಜಿ ಶ್ರೀ ಗುರುಬಸವ ಪಟ್ಟದ್ದೇವರು, ಹುಲಸೂರು ಶ್ರೀ ಶಿವಾನಂದ ಸ್ವಾಮೀಜಿ, ಬೆಲ್ದಾಳೆಯ ಸಿದ್ದರಾಮ ಶರಣರು, ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ವಿ.ಸೋಮಣ್ಣ, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯ್ಲಿ, ಬಿ.ಎಸ್. ಯಡಿಯೂರಪ್ಪ, ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಡಾ. ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಎಂ.ಸಿ. ಸುಧಾಕರ್, ಎಂ.ಬಿ. ಪಾಟೀಲ್, ಎನ್.ಎಸ್. ಬೋಸ್ ರಾಜು, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ರಾಜಶೇಖರ ಪಾಟೀಲ್, ಬಂಡೆಪ್ಪ ಕಾಶೆಂಪೂರ, ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಸಂಸತ್ ಸದಸ್ಯರಾದ ಬಸವರಾಜ ಬೊಮ್ಮಾಯಿ, ಸಾಗರ್ ಖಂಡ್ರೆ, ಶಾಸಕರುಗಳಾದ ಡಾ. ಶೈಲೇಂದ್ರ ಬೆಲ್ದಾಳೆ, ಮಹಾಸಭಾದ ರಾಜ್ಯಾಧ್ಯಕ್ಷರಾದ ಶಂಕರ ಬಿದರಿ ಹಾಗೂ ಹರಗುರು ಚರಮೂರ್ತಿಗಳು ಮುಂತಾದವರು ಪಾಲ್ಗೊಂಡಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂ ಶ್ರಮಯೋಗಿ ಮಾನ್ ಧನ್ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಫೆ.17: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು...

ಹಿರಿಯಡಕ ಕಾಲೇಜು: ಎನ್‌.ಎಸ್‌.ಎಸ್‌ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಪರ್ಕಳ, ಫೆ.17: ಅಹಂಕಾರ ಕರಗಿ 'ನಾವು' ಎಂಬ ಭಾವನೆ ಬೆಳೆಸಿ, ಎಲ್ಲಾ...

ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ SZA; ಅಭಿಮಾನಿಗಳಿಗೆ ಅಚ್ಚರಿ

ಕೊಯಮತ್ತೂರು, ಫೆ.17: ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತರಾದ...
error: Content is protected !!