Thursday, October 29, 2026
Thursday, October 29, 2026

ವಿಧಾನ ಪರಿಷತ್ ಚುನಾವಣಾ ಫಲಿತಾಂಶ- ಬಿಜೆಪಿ ವಿಜಯೋತ್ಸವ

ವಿಧಾನ ಪರಿಷತ್ ಚುನಾವಣಾ ಫಲಿತಾಂಶ- ಬಿಜೆಪಿ ವಿಜಯೋತ್ಸವ

Date:

ಮೈಸೂರು, ಅ.29: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಭ್ಯರ್ಥಿಗಳ ನಿಚ್ಚಳ ಗೆಲುವು ಪಕ್ಷದ ಬೆನ್ನೆಲುಬಾಗಿರುವ ಪ್ರತಿಯೊಬ್ಬ ಕಾರ್ಯಕರ್ತರ ಬೆವರಿನ ಫಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಹೇಳಿದರು. ಮೈಸೂರಿನ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ಸಂಭ್ರಮಿಸಿ ಅವರು ಮಾತನಾಡಿದರು. ರಾಜ್ಯದ ಶಿಕ್ಷಕ ಹಾಗೂ ಪದವೀಧರ ಮತದಾರರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ವಿಶ್ವಾಸವಿಟ್ಟು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಎನ್.ಡಿ.ಎ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಹಾಗೂ ಜಯ ಸಾಧಿಸಿದ ನಾಲ್ಕೂ ಎನ್.ಡಿ.ಎ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಶಾಸಕರಾದ ಶ್ರೀವತ್ಸ, ಪರಿಷತ್ ಸದಸ್ಯರಾದ ರಘು ಕೌಟಿಲ್ಯ, ಮಾಜಿ ಶಾಸಕರುಗಳಾದ ನಿರಂಜನಕುಮಾರ್, ಹರ್ಷವರ್ಧನ್, ಪಕ್ಷದ ಮೈಸೂರು ವಿಭಾಗ ಪ್ರಭಾರಿ ಸ್ವಾಮಿ ಮರಳಾಪುರ, ರಾಜ್ಯ ಉಪಾಧ್ಯಕ್ಷರುಗಳಾದ ಎನ್ ಮಹೇಶ್, ರಾಜೇಂದ್ರ, ನಗರಾಧ್ಯಕ್ಷ ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಕುಮರಳ್ಳಿ ಸುಬ್ಬಣ್ಣ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ. 30, 31: ಮಾಹೆಯಲ್ಲಿ ‘ಸುಸ್ಥಿರ ಆರೋಗ್ಯ ಶ್ರೇಷ್ಠತೆ’ ರಾಷ್ಟ್ರೀಯ ಸಮಾವೇಶ

ಮಣಿಪಾಲ, ಅ.29: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ...

ವಿದ್ಯುತ್ ಕಡಿತ- ಉಡುಪಿ ನಗರ ಬಿಜೆಪಿ ವತಿಯಿಂದ ಪಂಜಿನ ಮೆರವಣಿಗೆ

ಉಡುಪಿ, ಅ.29: ವಿದ್ಯುತ್ ಕಡಿತ ಹಾಗೂ ಕಡಿಮೆ ವೋಲ್ಟೇಜ್ ಸಮಸ್ಯೆಗಳನ್ನು ಖಂಡಿಸಿ...

ಸೋಲಿನ ಕುರಿತು ಆತ್ಮಾವಲೋಕನ ಮಾಡುತ್ತೇವೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಬೆಂಗಳೂರು, ಅ.29: ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ

ಕಾಪು, ಅ.29: ಉತ್ತರ ಕನ್ನಡ ಜಿಲ್ಲೆಯ ಎಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ...
error: Content is protected !!