ಬೆಂಗಳೂರು, ಜೂ.21: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಅಧಿಕಾರ ಬಲದಿಂದ ನಮ್ಮ ಹೋಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ, ನಿಮ್ಮ ಸರ್ಕಾರದ ವಿರುದ್ಧ ರಾಜ್ಯದ ಜನಸಾಮಾನ್ಯರ ಸಹನೆಯ ಕಟ್ಟೆಯೊಡೆದು ಅವರು ಬೀದಿಗಿಳಿದು ಹೋರಾಡುವ ದಿನ ದೂರವಿಲ್ಲ. ದಿನಕ್ಕೊಂದು ದರ ಏರಿಕೆಯ ನಿರ್ಧಾರಗಳನ್ನು ಕೈ ಬಿಡುವ ತನಕ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಪ್ರಕೋಷ್ಠಕಗಳ ರಾಜ್ಯ ಸಂಚಾಲಕ ದತ್ತಾತ್ರಿ, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಜಿಲ್ಲಾಧ್ಯಕ್ಷರಾದ ಎಸ್.ಹರೀಶ್, ಸಪ್ತಗಿರಿ ಗೌಡ, ಸೇರಿದಂತೆ ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.