ನವದೆಹಲಿ, ಏ. 11: ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿಯ ಮೊದಲ ಪಟ್ಟಿ ಮಂಗಳವಾರ ಬಿಡುಗಡೆಯಾಗಿದೆ. ಬಿಜೆಪಿ ಕೇಂದ್ರ ಕಛೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. 52 ಹೊಸಮುಖಗಳಿಗೆ ಟಿಕೆಟ್ ನೀಡಲಾಗಿದೆ. 189 ಮಂದಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ನೀಡಲಾಗಿದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದರು.
ಉಡುಪಿಯಿಂದ ಯಶ್ಪಾಲ್ ಸುವರ್ಣ ಅವರಿಗೆ ಟಿಕೆಟ್ ಸಿಕ್ಕಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಟಿಕೆಟ್ ಕೈತಪ್ಪಿದೆ. ಕಾಪುವಿನಲ್ಲಿ ಶಾಸಕ ಲಾಲಾಜಿ ಮೆಂಡನ್ ಅವರಿಗೆ ಟಿಕೆಟ್ ಕೈತಪ್ಪಿದ್ದು, ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಟಿಕೆಟ್ ಸಿಕ್ಕಿದೆ. ಕುಂದಾಪುರದಲ್ಲಿ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಟಿಕೆಟ್ ಸಿಕ್ಕಿದೆ. ಕಾರ್ಕಳದಲ್ಲಿ ಸಚಿವ ಸುನಿಲ್ ಕುಮಾರ್, ಹರೀಶ್ ಪೂಂಜ, ಉಮಾನಾಥ್ ಕೋಟ್ಯಾನ್, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ ಅವರಿಗೆ ಟಿಕೆಟ್ ಸಿಕ್ಕಿದ್ದು, ಸಚಿವ ಅಂಗಾರ ಅವರಿಗೆ ಟಿಕೆಟ್ ಕೈತಪ್ಪಿದೆ.
ಬಸವರಾಜ ಬೊಮ್ಮಾಯಿ- ಶಿಗ್ಗಾಂವ್, ನಿಪ್ಪಾಣಿ- ಶಶಿಕಲಾ ಜೊಲ್ಲೆ, ಅಥಣಿ- ಮಹೇಶ್ ಕುಮಟಳ್ಳಿ, ಗೋಕಾಕ್- ರಮೇಶ್ ಜಾರಕಿಹೊಳಿ, ಮುಧೋಳ- ಗೋವಿಂದ ಕಾರಜೋಳ, ಬೀಳಗಿ-ಮುರುಗೇಶ್ ನಿರಾಣಿ, ಬಿಜಾಪುರ ನಗರ- ಬಸನಗೌಡ ಪಾಟೀಲ್ ಯತ್ನಾಳ್, ಕುಮಟಾ ದಿನಕರ ಶೆಟ್ಟಿ, ಹೊನ್ನಾಳಿ ರೇಣುಕಾಚಾರ್ಯ, ಶಿರಾರಿಪುರ ಬಿ ವೈ ವಿಜಯೇಂದ್ರ, ಶಿರಸಿ ವಿಶ್ವೇಶ್ವರ ಹೆಗಡೆ ಕಾಗೇರಿ, ಬಳ್ಳಾರಿ ಗ್ರಾಮೀಣ ಬಿ. ಶ್ರೀರಾಮುಲು, ಬಳ್ಳಾರಿ ನಗರ ಗಾಲಿ ಸೋಮಶೇಖರ ರೆಡ್ಡಿ, ವರುಣಾ ಕ್ಷೇತ್ರದಿಂದ ವಿ ಸೋಮಣ್ಣ ಅವರಿಗೆ ಟಿಕೆಟ್ ಸಿಕ್ಕಿದೆ.
ಧರ್ಮೇಂದ್ರ ಪ್ರಧಾನ್, ಪ್ರಭಾರಿ ಅರುಣ್ ಸಿಂಗ್, ಕರ್ನಾಟಕ ಚುನಾವಣಾ ಉಸ್ತುವಾರಿ ಮಾನ್ಸುಖ್ ಮಾಂಡವಿಯಾ, ಸಹ ಉಸ್ತುವಾರಿ ಅಣ್ಣಾಮಲೈ ಸುದ್ಧಿಗೋಷ್ಠಿಯಲ್ಲಿದ್ದರು.
ಮೊದಲ ಪಟ್ಟಿಯ ಸಂಪೂರ್ಣ ವಿವರ: