Saturday, September 5, 2026
Saturday, September 5, 2026

ಬಿಜಿಪಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆ ಇದೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬಿಜಿಪಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆ ಇದೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

ಬೆಂಗಳೂರು, ಮಾ.6: ಈ ವರ್ಷ ಕೇಂದ್ರದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕೇಂದ್ರ ಸರ್ಕಾರದ ಸಾಲ 218 ಲಕ್ಷ ಕೋಟಿ ದಾಟಿದೆ. ಬಿಜಿಪಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆ ಇದೆ? ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಬಜೆಟ್ ಮಂಡಿಸಿದ ನಂತರ ಸುದ್ಧಿಗಾರರ ಜತೆ ಮಾತನಾಡುತ್ತಾ ಸಿಎಂ ಬಜೆಟ್ ಕುರಿತು ಮಾತನಾಡಿದರು.

ಸಾಲವು ಮಾನದಂಡಗಳಲ್ಲಿ ತಿಳಿಸಿದ ಮಿತಿಯಲ್ಲಿರಬೇಕು. 2014ರ ಮೊದಲು, 53.11 ಲಕ್ಷ ಕೋಟಿಯಿದ್ದ ದೇಶದ ಸಾಲ ಈಗ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ರೂ. 165 ಲಕ್ಷ ಕೋಟಿಯಾಗಿದೆ. ಪ್ರತಿಪಕ್ಷ ನಾಯಕ ಅಶೋಕರವರು ರಾಜ್ಯಸರ್ಕಾರ ಸಾಲ ಮಾಡುತ್ತಿದೆ ಎಂಬ ಟೀಕೆ ಮಾಡಲು ಯಾವುದೇ ನೈತಿಕತೆ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವಾಗ, 5,33,847 ಕೋಟಿ ಸಾಲವಿತ್ತು. ಎಲ್ಲ ಸರ್ಕಾರಗಳ ಅವಧಿಯಲ್ಲಿ ಸಾಲಗಳನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!