ಬೆಂಗಳೂರು, ಜು.25: ಬಿಜೆಪಿ ಹಾಗೂ ಜೆಡಿಎಸ್ ಶಾಸಕರ ನಿಯೋಗ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರನ್ನು ಗುರುವಾರ ಭೇಟಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ದೂರು ಸಲ್ಲಿಸಲಾಯಿತು. ಮೂಡಾ ಹಗರಣ ಚರ್ಚೆಗೆ ಅವಕಾಶವನ್ನೇ ನೀಡದಿಲ್ಲ ಎಂದು ದೂರಿದ ನಿಯೋಗ, ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿದರು. ವಿರೋಧ ಪಕ್ಷ ನಾಯಕರಾದ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.
ಬಿಜೆಪಿ-ಜೆಡಿಎಸ್ ಶಾಸಕರ ನಿಯೋಗದಿಂದ ರಾಜ್ಯಪಾಲರ ಭೇಟಿ

ಬಿಜೆಪಿ-ಜೆಡಿಎಸ್ ಶಾಸಕರ ನಿಯೋಗದಿಂದ ರಾಜ್ಯಪಾಲರ ಭೇಟಿ
Date: