ಮಂಡ್ಯ, ಆ.7: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯು 5 ದಿನಗಳು ಪೂರೈಸಿದ್ದು ಬುಧವಾರ ಮದ್ದೂರು ತಾಲೂಕಿನ ತೂಬಿನಕೆರೆಯಲ್ಲಿ ಪಾದಯಾತ್ರೆ ಅಂತ್ಯಗೊಂಡಿತು. ಪಾದಯಾತ್ರೆಯ ವೇಳೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಜನಬೆಂಬಲದೊಂದಿಗೆ ಮುಂದುವರಿಯಲಿದೆ ಹೇಳಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ, ವಿರೋಧ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಮಾಜಿ ಸಚಿವ ಬಿ ಶ್ರೀರಾಮುಲು, ಸಿ.ಟಿ.ರವಿ, ಭೈರತಿ ಬಸವರಾಜು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕೆ.ಸಿ.ನಾರಾಯಣಗೌಡ, ರಾಜುಗೌಡ, ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾದ ಸಿ.ಬಿ. ಸುರೇಶ್ ಬಾಬು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರು, ಉಭಯ ಪಕ್ಷಗಳ ಕಾರ್ಯಕರ್ತರು ಭಾಗವಹಿಸಿದ್ದರು.