Saturday, March 28, 2026
Saturday, March 28, 2026

ಕರ್ನಾಟಕದ ವಿಧಾನ ಮಂಡಲದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ: ವಿಪಕ್ಷ ನಾಯಕ ಆರ್ ಅಶೋಕ್

ಕರ್ನಾಟಕದ ವಿಧಾನ ಮಂಡಲದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ: ವಿಪಕ್ಷ ನಾಯಕ ಆರ್ ಅಶೋಕ್

Date:

ಬೆಂಗಳೂರು, ಜ.22: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನ ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ ಪಾಲಿಸಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರು ಅತಿರೇಕದಿಂದ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.

ಇಷ್ಟಕ್ಕೂ ರಾಜ್ಯಪಾಲರು ಈ ರೀತಿ ತಮ್ಮ ಭಾಷಣವನ್ನ ಪೂರ್ತಿ ಓದದೆ ಕೇವಲ ಸಾಂಕೇತಿಕವಾಗಿ ಮಂಡಿಸಿ ಹೊರಟಿರುವುದು ಇದೇನು ಮೊದಲಲ್ಲ. ಈ ಹಿಂದೆ ಮಾಜಿ ರಾಜ್ಯಪಾಲರುಗಳಾದ ಖುರ್ಷಿದ್ ಆಲಂ ಖಾನ್ ಹಾಗೂ ಹಂಸರಾಜ್ ಭಾರಧ್ವಾಜ್ ಅವರು ಈ ರೀತಿ ಮಾಡಿದ್ದಾರೆ.

ಇಂದಿನ ಘಟನಾವಳಿಗಳು ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನವಾಗಿದ್ದು, ಸದನದ ಗೌರವಕ್ಕೆ ಚ್ಯುತಿ ತರುವ ರೀತಿ ವರ್ತಿಸಿದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದೇನೆ ಎಂದು ಅಶೋಕ್ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್...

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...
error: Content is protected !!