Home ಸುದ್ಧಿಗಳು ರಾಜ್ಯ ಶೇ. 50 ರ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಶೇ. 50 ರ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

274
0

ಉಡುಪಿ, ಜು. 31: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದ್ದು, ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ http://www.kannadapustakapradhikara.com (ನಮ್ಮ ಪುಸ್ತಕಗಳ ವಿಭಾಗ) ನಲ್ಲಿ ಕೂಡ ಶೇ. 50 ರ ರಿಯಾಯಿತಿ ಲಭ್ಯವಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.