Monday, February 9, 2026
Monday, February 9, 2026

ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಅನುದಾನ ಒದಗಿಸಿಕೊಟ್ಟಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಅನುದಾನ ಒದಗಿಸಿಕೊಟ್ಟಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಂಗಳೂರು, ಜ.28: ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು. ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2,000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕೆ.ಸಿ. ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ

ಉಡುಪಿ, ಫೆ.9: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು...

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

ಉಡುಪಿ, ಫೆ.9: ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ...

ಸಮಸ್ಯಾತ್ಮಕ ನಡವಳಿಕೆಯ ಹಿಂದೆ ಮೌನವಾಗಿ ಅಡಗಿರುವ ಮುಖ

ಐದನೇ ತರಗತಿಯಲ್ಲಿ ಓದುತ್ತಿದ್ದ ರಾಹುಲ್ ಇತ್ತೀಚಿನ ದಿನಗಳಲ್ಲಿ ಕಲಿಕೆಯತ್ತ ಅನಾಸಕ್ತಿ ತೋರಿಸುತ್ತಿದ್ದ....

ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ: ಡಾ. ಶ್ರುತಿ ಬಲ್ಲಾಳ್

ಉಡುಪಿ, ಫೆ.9: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ...
error: Content is protected !!