Tuesday, February 25, 2025
Tuesday, February 25, 2025

ಇದೊಂದು ಅಭಿವೃದ್ಧಿ ಪರ ಬಜೆಟ್: ಲಕ್ಷ್ಮಿ ಹೆಬ್ಬಾಳ್ಕರ್

ಇದೊಂದು ಅಭಿವೃದ್ಧಿ ಪರ ಬಜೆಟ್: ಲಕ್ಷ್ಮಿ ಹೆಬ್ಬಾಳ್ಕರ್

Date:

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಹೃದಯಪೂರ್ವಕ ಧನ್ಯವಾದ ಅರ್ಪಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಸ್ಮಾರ್ಟ್ ಫೋನ್‌ಗಾಗಿ 90 ಕೋಟಿ ರೂಪಾಯಿ ನೀಡಲಾಗಿದೆ. 90 ಕೋಟಿ ರೂ. ವೆಚ್ಚದಲ್ಲಿ 75,938 ಫೋನ್‌ಗಳನ್ನ ನೀಡಲಾಗುತ್ತಿದ್ದು, ಇದರಿಂದ ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳ್ಳಲಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗಿರುವುದು ಖುಷಿ ತಂದಿದೆ‌. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು. ಒಟ್ಟಾರೆ ಇದೊಂದು ಅತ್ಯಂತ ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಆಗಿದೆ. ತವರು ಜಿಲ್ಲೆ ಬೆಳಗಾವಿ ಹಾಗೂ ಉಸ್ತುವಾರಿ ಹೊತ್ತಿರುವ ಉಡುಪಿ ಜಿಲ್ಲೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!