Wednesday, December 4, 2024
Wednesday, December 4, 2024

ಸುಳ್ಳುಗಳನ್ನೇ ತುಂಬಿಸಿರುವ ರೈತ ವಿರೋಧಿ ಬಜೆಟ್: ಬಿ.ವೈ. ವಿಜಯೇಂದ್ರ

ಸುಳ್ಳುಗಳನ್ನೇ ತುಂಬಿಸಿರುವ ರೈತ ವಿರೋಧಿ ಬಜೆಟ್: ಬಿ.ವೈ. ವಿಜಯೇಂದ್ರ

Date:

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸದನ ಬಹಿಷ್ಕರಿಸಿ, ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ ಇದು ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಆಗಿದೆ. ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಿಸದೇ, ಅಭಿವೃದ್ಧಿಯಲ್ಲಿ ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಡಿಗಾಸು ನೀಡದೇ, ಬರಗಾಲದಿಂದ ನೊಂದು ತೀವ್ರ ಸಂಕಷ್ಟದಲ್ಲಿರುವ ರೈತರನ್ನು ನಿರ್ಲಕ್ಷಿಸಿ, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಹಾಗೂ ಹಿಂದುಳಿದ ವರ್ಗಗಳಿಗೂ ನಿರಾಸೆ ಮೂಡಿಸಿದೆ ಎಂದು ಹೇಳಿದರು.

ವಿರೋಧ ಪಕ್ಷ ನಾಯಕರಾದ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಎರಡೂ ಪಕ್ಷಗಳ ಉಭಯ ಸದನಗಳ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!