Friday, October 2, 2026
Friday, October 2, 2026

ಜಾನುವಾರು ಪ್ರದರ್ಶನಕ್ಕೆ ಚಾಲನೆ

ಜಾನುವಾರು ಪ್ರದರ್ಶನಕ್ಕೆ ಚಾಲನೆ

Date:

ಧಾರವಾಡ, ಅ.1: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಎರಡನೇ ದಿನದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಾನುವಾರು ಪ್ರದರ್ಶನಕ್ಕೆ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ವಿ.ಪ್ರಕಾಶ ಹಾಗೂ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಗೋ ಮಾತೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಜಾನುವಾರು ಪ್ರದರ್ಶನದಲ್ಲಿರುವ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿದ ನಂತರ ಜಾನುವಾರು ತಳಿ ಪ್ರದರ್ಶನದ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಅದರಂತೆಯೇ ಜಾನುವಾರುಗಳಿಗೆ ಹಣ್ಣು ಹಂಪಲು ತಿನ್ನಿಸಿ, ಕೃಷಿ ಮೇಳ ಯಶಸ್ವಿಯಾಗಿ ನಡೆಯಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು.

ಡಾ.ಎ.ಎಸ್ ಸಜ್ಜನ್, ಡಾ. ಆರ್.ಆರ್. ಹಂಚಿನಾಳ, ಜಯಶ್ರೀ ಶಿಂತ್ರಿ, ವೀರನಗೌಡ ಪೋಲಿಸಗೌಡರ, ಪಾರ್ವತಿ ಎಸ್. ಕುರ್ಲೆ, ರವಿಕುಮಾರ್ ಮಾಳಗೇರ, ಬಸವರಾಜ ಕುಂದಗೋಳಮಠ, ಮಾಲತೇಶ ಶ್ಯಾಗೋಟ, ಡಾ. ಎಂ.ವಿ. ಮಂಜುನಾಥ, ಡಾ. ಮಂಜುಳಾ, ಡಾ. ಟಿ.ಆರ್. ಶಶಿಧರ, ಡಾ. ಸುರೇಖಾ ಸಕನಗೌಡರ ಸೇರಿದಂತೆ ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ವಿಜ್ಞಾನಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!