ಬೆಂಗಳೂರು, ಸೆ.5: ರಾಜ್ಯದಲ್ಲಿ 10 ಸಾವಿರ ಕ್ರೆಶ್ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದಲ್ಲಿ ಜಾರಿ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಪ್ರತ್ಯೇಕವಾಗಿ ಮಕ್ಕಳ ಪಾಲನಾ ಕೇಂದ್ರ ತೆರೆಯಲಾಗುತ್ತದೆ. 6 ತಿಂಗಳಿನಿಂದ 3 ವರ್ಷದ ಮಕ್ಕಳನ್ನು ಇಲ್ಲಿ ಪಾಲನೆ ಮಾಡಲಾಗುತ್ತದೆ. ಮನೆಗೆಲಸ, ಕಾರ್ಖಾನೆ, ಇತರ ಕೆಲಸಗಳಿಗೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಈ ಕೇಂದ್ರಗಳಲ್ಲಿ ಬಿಟ್ಟು ಹೋಗಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಕ್ರೆಶ್ ತೆರೆಯಲು ಕೇಂದ್ರ ಸರ್ಕಾರದ ಒಪ್ಪಿಗೆ
ಕ್ರೆಶ್ ತೆರೆಯಲು ಕೇಂದ್ರ ಸರ್ಕಾರದ ಒಪ್ಪಿಗೆ
Date: