Friday, October 2, 2026
Friday, October 2, 2026

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

Date:

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ ಮಾಡಲು ಹಾಗೂ ಆರೋಗ್ಯ ಸೇವೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ ಮತ್ತು ಪೋಸ್ಟರ್‍ಗಳನ್ನು ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅವರು ಬಿಡುಗಡೆ ಮಾಡಿದರು.

ಜಿಲ್ಲಾಡಳಿತ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಇವರ ಸಹಭಾಗಿತ್ವದಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ತಮ್ಮ ಸಮೀಪದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪೋಸ್ಟರ್ ಹಾಗೂ ಆರೋಗ್ಯ ಕೇಂದ್ರಗಳ ನಾಮಫಲಕವನ್ನು ಬಿಡುಗಡೆ ಮಾಡಲಾಯಿತು.

ಪ್ರಾರಂಭಿಕ ಹಂತದಲ್ಲಿ ಸುಮಾರು 50 ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ನಾಮಫಲಕ ಹಾಗೂ ಪೋಸ್ಟರ್ ಗಳನ್ನು ಅಳವಡಿಸಲಾಗುವುದು. ನಂತರ ಇನ್ನುಳಿದ ಕೇಂದ್ರಗಳಿಗೆ ಅಳವಡಿಕೆ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತದೆ. ಆರೋಗ್ಯ ಸೇವೆಗಳನ್ನ ಜನರಿಗೆ ಇನ್ನಷ್ಟು ಹತ್ತಿರವಾಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜೇಶ್ ಕುಮಾರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ರವಿಕುಮಾರ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಸುಂದರೇಶ್, ಐಪಿಹೆಚ್ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಕೌಶಿಕ್, ಸಮುದಾಯ ಆರೋಗ್ಯ ಅಧಿಕಾರಿ ರಾಧಿಕ, ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!