Sunday, January 19, 2025
Sunday, January 19, 2025

ಹಿರಿಯ ಸಾಹಿತಿ ಚಂಪಾ ನಿಧನ

ಹಿರಿಯ ಸಾಹಿತಿ ಚಂಪಾ ನಿಧನ

Date:

ಬೆಂಗಳೂರು: ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಕಸಾಪ ಮಾಜಿ ಅಧ್ಯಕ್ಷರು, ನಾಟಕಕಾರ, ಕವಿ, ಚಂಪಾ ಎಂದೇ ಪ್ರಖ್ಯಾತಿ ಪಡೆದಿದ್ದ ಚಂದ್ರಶೇಖರ ಪಾಟೀಲ ಇಂದು ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.

ಜೂನ್ 18, 1939 ರಂದು ಹಾವೇರಿಯಲ್ಲಿ ಹುಟ್ಟಿದ್ದ ಚಂಪಾ ಅವರು ಗೋಕಾಕ್ ಆಂದೋಲನ, ಬಂಡಾಯ ಚಳವಳಿ, ತುರ್ತುಪರಿಸ್ಥಿತಿ ವಿರೋಧಿ ಆಂದೋಲನ, ಮಂಡಲ್ ವರದಿ ಜಾರಿಗಾಗಿ ಆಂದೋಲನ, ರೈತ ಚಳವಳಿ ಮುಂತಾದ ಅನೇಕ ಸಾಮಾಜಿಕ ಮತ್ತು ಸಾಹಿತ್ಯಿಕ ಚಳುವಳಿಗಳನ್ನು ಮುನ್ನಡೆಸಿದ್ದರು.

ಪಾಟೀಲರು ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಿವೃತ್ತರಾದ ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಪಾಟೀಲರು 1989 ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಾವ್ಯ ಪ್ರಶಸ್ತಿ ಮತ್ತು 2009 ರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಪಂಪ ಪ್ರಶಸ್ತಿಗೆ ಭಾಜನರಾಗಿದ್ದರು.

ಬಾನುಲಿ, ಮಧ್ಯಬಿಂದು, 19 ಕವನಗಳು, ಗಾಂಧಿ ಸ್ಮರಣೆ, ಹೂವು ಹೆಣ್ಣು ತಾರೆ, ಶಾಲ್ಮಲಾ ನನ್ನ ಶಾಲ್ಮಲಾ, ಅರ್ಧ ಸತ್ಯದ ಹುಡುಗಿ (ಕವನಕ್ಕಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ), ಗುಂಡಮ್ಮನ ಗಜಲಗಲ್, ಕೊಡೆಗಳು, ಅಪ್ಪಾ, ಗುರ್ತಿನವರು, ಟಿಂಗರ ಬುಡ್ಡಣ್ಣ, ಗೋಕರ್ಣದ ಗೌಡಸಾನಿ, ನಲಕವಿಯ ಮಸ್ತಾಭಿಷೇಕ, ಜಗದಂಬೆಯ ಬೀದಿನಾಟಕ ಇವರ ಲೇಖನಿಯಿಂದ ಹೊರಹೊಮ್ಮಿದ ಕೆಲವು ಪ್ರಮುಖ ಕವಿತೆ ಮತ್ತು ನಾಟಕಗಳು.

ಚಂಪಾ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ, ಅಭಿಮಾನಿಗಳು ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!