Sunday, January 19, 2025
Sunday, January 19, 2025

ಚಾರುವಸಂತ ರಂಗ ತಾಲೀಮಿಗೆ ಚಾಲನೆ

ಚಾರುವಸಂತ ರಂಗ ತಾಲೀಮಿಗೆ ಚಾಲನೆ

Date:

ಬೆಂಗಳೂರು, ಸೆ. 14: ಹಲವು ಅತ್ಯುತ್ತಮ ಕೃತಿಗಳನ್ನು ಕನ್ನಡ ನಾಡಿಗೆ ನೀಡಿದ ನಾಡೋಜ ಹಂ.ಪ.ನಾಗರಾಜಯ್ಯರವರು ನಮ್ಮ ನಡುವಿನ ಒಬ್ಬ ಶ್ರೇಷ್ಠ ಸಾಹಿತಿ. ಹದಿನಾಲ್ಕು ಭಾಷೆಗಳಿಗೆ ಅನುವಾದಗೊಂಡಿರುವ ಅವರ ಪ್ರಸಿದ್ಧ ಕೃತಿಯಾಗಿರುವ ಚಾರುವಸಂತ ದೇಸೀ ಕಾವ್ಯವನ್ನು ರಂಗಕ್ಕೆ ತರಲು ನಮ್ಮ ಸಂಸ್ಥೆಗೆ ಬಹಳ ಹೆಮ್ಮೆ ಅನಿಸಿದೆ ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಅವರು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯಲಿರುವ ಚಾರುವಸಂತ ನಾಟಕದ ತಾಲೀಮನ್ನು ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೇಲ್ ನಲ್ಲಿ ನಾಟಕದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿದ್ದ ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ ಮಾತನಾಡಿ, ನನ್ನ ಗುರುಗಳ ಕೃತಿಯೊಂದು ರಂಗಕೃತಿಯಾಗುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ. ಹಲವು ಮಹತ್ವದ ರಂಗ ಪ್ರಯೋಗಗಳನ್ನು ರಂಗಕ್ಕೆ ತಂದಿರುವ ಡಾ.ಜೀವನ್ ರಾಂ ಸುಳ್ಯರ ನಿರ್ದೇಶನದಲ್ಲಿ ಈ ಚಾರುವಸಂತವು ಕನ್ನಡ ರಂಗಭೂಮಿಯಲ್ಲಿ ಹೊಸ ಸಂಚಲನ ಮೂಡಿಸಲಿ ಎಂದುಶುಭ ಹಾರೈಸಿದರು. ಕೃತಿಕಾರ ನಾಡೋಜ ಹಂ.ಪ.ನಾಗರಾಜಯ್ಯ ಚಾರುವಸಂತದ ರಂಗರೂಪವನ್ನು ಸಿದ್ಧಪಡಿಸಿದ ಸಾಹಿತಿ, ರಂಗಕರ್ಮಿ ಡಾ.ನಾ.ದಾ.ಶೆಟ್ಟಿ ಅವರ ಶ್ರಮವನ್ನು ಶ್ಲಾಘಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರ ಜೊತೆ ನೀನಾಸಂ ರಂಗಾಯಣಗಳಲ್ಲಿ ಅನುಭವ ಪಡೆದ ಕೆಲವು ಕಲಾವಿದರೂ ಪಾತ್ರವಹಿಸಲಿದ್ದು ಅಕ್ಟೋಬರ್ ಕೊನೆಯ ವಾರದಲ್ಲಿ
ಪ್ರದರ್ಶನಗೊಳ್ಳಲಿದೆ ಎಂದು ನಾಟಕದ ನಿರ್ದೇಶಕ ಜೀವನ್ ರಾಂ ಸುಳ್ಯ ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!