Tuesday, October 27, 2026
Tuesday, October 27, 2026

ಚೆನ್ನಮ್ಮನ ಶೌರ್ಯ ಕನ್ನಡ ನಾಡಿನ ಸ್ವಾಭಿಮಾನದ ಪ್ರತೀಕ; ವಾಯುವ್ಯ ಸಾರಿಗೆ ಸಂಸ್ಥೆಗೆ ರಾಣಿ ಚೆನ್ನಮ್ಮನ ಹೆಸರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಚೆನ್ನಮ್ಮನ ಶೌರ್ಯ ಕನ್ನಡ ನಾಡಿನ ಸ್ವಾಭಿಮಾನದ ಪ್ರತೀಕ; ವಾಯುವ್ಯ ಸಾರಿಗೆ ಸಂಸ್ಥೆಗೆ ರಾಣಿ ಚೆನ್ನಮ್ಮನ ಹೆಸರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Date:

ಬೆಳಗಾವಿ, ಅ.26: ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಿತ್ತೂರಿನ ಐತಿಹಾಸಿಕ ಕೋಟೆ ಆವರಣದಲ್ಲಿ ಚೆನ್ನಮ್ಮನ ಕಿತ್ತೂರು ಉತ್ಸವ–2026ರ ಸಮಾರೋಪ ಸಮಾರಂಭ ನಡೆಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತನಾಡುತ್ತಾ, ಬ್ರಿಟಿಷರ ವಿರುದ್ಧ ವೀರಾವೇಶದಿಂದ ಹೋರಾಡಿ, ನಾಡಿನ ಸ್ವಾಭಿಮಾನ ಮತ್ತು ಸ್ವಾತಂತ್ರ್ಯದ ಕೆಚ್ಚನ್ನು ಜಗತ್ತಿಗೆ ಸಾರಿದ ವೀರರಾಣಿ ಕಿತ್ತೂರು ಚೆನ್ನಮ್ಮನ ಧೈರ್ಯ, ದೃಢಸಂಕಲ್ಪ ಮತ್ತು ಅಪ್ರತಿಮ ಹೋರಾಟದ ಸ್ಮರಣೆ ನಮ್ಮೆಲ್ಲರಿಗೂ ಸದಾ ಸ್ಫೂರ್ತಿ. ಚೆನ್ನಮ್ಮನ ಕಿತ್ತೂರು ಉತ್ಸವವು ನಮ್ಮ ನಾಡಿನ ಇತಿಹಾಸ, ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವದ ವೇದಿಕೆಯಾಗಿದೆ ಎಂದರು.

ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲಾಗುವುದು. ಚೆನ್ನಮ್ಮ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ತಕ್ಷಣವೇ ಆದೇಶ ನೀಡಲಾಗುವುದು. ಶಾಸಕರ ಬೇಡಿಕೆ ಮೇರೆಗೆ ಮುಂದಿನ ಬಜೆಟ್‌ನಲ್ಲಿ ರೂ. 40 ಕೋಟಿ ಅನುದಾನ ನೀಡಲಾಗುವುದು.

ನಾನು ನೀರಾವರಿ ಸಚಿವನಾಗಿದ್ದಾಗ ಈ ಭಾಗದ ರೈತರ ಬದುಕಿಗೆ ಶ್ರೀ ಚನ್ನವೃಷಭೇಂದ್ರ ಅವರ ಹೆಸರಲ್ಲಿ ಏತ ನೀರಾವರಿ ಯೋಜನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. 520 ಕೋಟಿ ರೂ. ಮೊತ್ತದ ಯೋಜನೆಗೆ ಸರ್ಕಾರ ಚಿಂತನೆ ನಡೆಸಿದೆ. ಈ ಕ್ಷೇತ್ರದಲ್ಲಿ 100 ಹಾಸಿಗೆಗಳ ಆಸ್ಪತ್ರೆ, 300 ಕೋಟಿ ರೂಪಾಯಿ ಮೊತ್ತದ ಲೋಕೋಪಯೋಗಿ ಇಲಾಖೆ ಕಾಮಗಾರಿ ಸೇರಿದಂತೆ ಸುಮಾರು 1000 ಕೋಟಿ ವೆಚ್ಚದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.

ಕಿತ್ತೂರಿಗೆ ತನ್ನದೇ ಆದ ಇತಿಹಾಸವಿದೆ. ಚೆನ್ನಮ್ಮ ಕನ್ನಡದ ಮಣ್ಣಿಗಾಗಿ ಮಡಿದ ದಿಟ್ಟ ಹೋರಾಟಗಾರ್ತಿ. ಕಿತ್ತೂರಿನ ಕಥೆ ಚೆನ್ನಮ್ಮ ಅವರ ಇತಿಹಾಸ ಸಾರುತ್ತದೆ, ಸ್ವಾಭಿಮಾನದ ಮಹಿಮೆ. ರಾಣಿ ಚೆನ್ನಮ್ಮನ ಧೈರ್ಯ ಪ್ರತಿ ಪೀಳಿಗೆಗೆ ಸ್ವಾಭಿಮಾನದ ಪಾಠ. ಕಿತ್ತೂರು ಎಂದರೆ ವೀರರ ಸಂಕೇತ. ಕಿತ್ತೂರು ಉತ್ಸವ ನಾಡಿನ ಹೆಮ್ಮೆಯ ಸಂಕೇತ. ಚೆನ್ನಮ್ಮನ ಸಾಹಸ ನಮ್ಮೆಲ್ಲರ ಸ್ಫೂರ್ತಿ, ಅವರ ತ್ಯಾಗದ ನೆನಪು ಅಜರಾಮರ. ಚೆನ್ನಮ್ಮ ಎಂಬುದು ಕೇವಲ ಹೆಸರಲ್ಲ ಸ್ವಾಭಿಮಾನ, ಶೌರ್ಯ, ಸ್ವಾತಂತ್ರ್ಯದ ಸಂಕೇತ.

ರಾಜ್ಯದಲ್ಲಿ ಶಾಂತಿಯುತ ಉತ್ತಮ ಆಡಳಿತ ನೀಡುತ್ತಿದ್ದೇವೆ. ಈ ಕ್ಷೇತ್ರದ ಶಾಸಕರ ಜೊತೆ ಇಡೀ ಸರ್ಕಾರ ಇದೆ. ಇಲ್ಲಿನ ಸುವರ್ಣ ಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ ಮಾಡಿದೆವು. ಸಮಾನತೆಯಿಂದ ಬೆಳೆಯಲು, ಪ್ರಜಾಪ್ರಭುತ್ವ ಮೌಲ್ಯ ಎತ್ತಿ ಹಿಡಿಯಲು ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಹೇಳಿದರು.

ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು, ಶ್ರೀಗುರು ಮಡಿವಾಳೇಶ್ವರ ಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು, ಕಾದರವಳ್ಳಿ ಸೀಮಿ ಮಠದ ಪಾಲಾಕ್ಷ ಶಿವಯೋಗೀಶ್ವರ ಸ್ವಾಮೀಜಿಗಳು, ಬೈಲೂರು ನಿಷ್ಕಲಮಂಟಪ ಮಠದ ನಿಜಗುಣಾನಂದ ಸ್ವಾಮೀಜಿಗಳು, ಸಚಿವರಾದ ರುದ್ರಪ್ಪ ಲಮಾಣಿ, ಎಸ್.ಎಸ್.ಮಲ್ಲಿಕಾರ್ಜುನ, ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಆಸೀಫ್ ರಾಜು ಸೇಠ್, ಎನ್.ಎಚ್. ಕೋನರಡ್ಡಿ, ಮಹಾಂತೇಶ್ ಕೌಜಲಗಿ, ವಿಶ್ವಾಸ್ ವೈದ್ಯ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

ಮಣಿಪಾಲ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026...

ಅ. 30: ನೇರ ಸಂದರ್ಶನ

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್,...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕಾರ್ಕಳ, ಅ.27: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನೆ,...
error: Content is protected !!