Thursday, October 1, 2026
Thursday, October 1, 2026

ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Date:

ಬೆಳಗಾವಿ, ಆ.6: ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ 565 ಮಿ.ಮೀ ಹೆಚ್ಚು ಮಳೆಯಾಗಿದ್ದು, ಇದು ವಾಡಿಕೆಗಿಂತ ಶೇ.62 ರಷ್ಟು ಹೆಚ್ಚಾಗಿದೆ. ಅತಿವೃಷ್ಟಿಯಿಂದ 6 ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ.

ಸಾವಿಗೀಡಾದ ಒಂದು ಜಾನುವಾರಿಗೆ 37,500 ರೂಪಾಯಿಯಂತೆ ಎಲ್ಲಾ 12 ಜಾನುವಾರುಗಳಿಗೆ ಪರಿಹಾರ ನೀಡಲಾಗಿದೆ. ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 48 ಮನೆಗಳು ಪೂರ್ಣ ಹಾನಿಗೀಡಾಗಿದ್ದು, 950 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಈ ಹಿಂದೆ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಹಾನಿಗೆ ನೀಡಲಾದ ಪರಿಹಾರ ದುರುಪಯೋಗವಾದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ದುರುಪಯೋಗ ತಪ್ಪಿಸಲು ಪೂರ್ಣ ಮನೆ ಹಾನಿಗೀಡಾದವರಿಗೆ ರೂ. 1.20 ಲಕ್ಷ ನಗದು ಪರಿಹಾರ ನೀಡಲಾಗುತ್ತಿದ್ದು, ಇದರೊಂದಿಗೆ ಮನೆಯನ್ನು ಸಹ ನಿರ್ಮಿಸಿ ಕೊಡಲಾಗುತ್ತಿದೆ.

ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಭಾಗಶ: ಹಾನಿಗೀಡಾದ ಮನೆಗಳಿಗೆ 6,500 ರೂ. ಪರಿಹಾರವನ್ನು ನೀಡಬೇಕಾಗಿದೆ. ಆದರೆ ರಾಜ್ಯ ಸರ್ಕಾರ 50 ಸಾವಿರ ರೂ. ಪರಿಹಾರ ನೀಡುತ್ತಿದೆ. ಮಳೆಯಿಂದ ಹಾನಿಗೀಡಾದವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 43,500 ರೂ. ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ನೀಡುತ್ತಿದೆ. ಈ ಹಿಂದೆ ಪರಿಹಾರದ ವಿಷಯದಲ್ಲಿ ವಿವಿಧ ಮಾನದಂಡಗಳನ್ನು ಅನುಸರಿಸಲಾಗುತ್ತಿತ್ತು. ಈಗ ಏಕರೂಪದಲ್ಲಿ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ 17 ಜನರಿಗೆ ಪರಿಹಾರ ಒದಗಿಸಲಾಗಿದ್ದು, ಮನೆ ಹಾನಿಗೀಡಾದ ಎಲ್ಲರಿಗೂ ಆದಷ್ಟು ಬೇಗನೆ ಪರಿಹಾರ ಒದಗಿಸಲಿದ್ದೇವೆ.

ಜಿಲ್ಲೆಯಲ್ಲಿ 41,706 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆಗಳಿಗೆ ಹಾನಿಯಾಗಿದೆ, 372 ಹೆಕ್ಟೇರ್‌ ತೋಟಗಾರಿಕಾ ಬೆಳೆಗಳಿಗೆ ಹಾನಿ ಸಂಭವಿಸಿದೆ. ಬೆಳೆ ಹಾನಿ ಬಗ್ಗೆ ಸಮರ್ಪಕವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚಿಸಲಾಗಿದೆ. ಮಳೆಯಿಂದಾಗಿ 2,962 ವಿದ್ಯುತ್‌ ಕಂಬಗಳು ಹಾನಿಗೀಡಾಗಿದ್ದು, ಆದಷ್ಟು ಬೇಗನೆ ವಿದ್ಯುತ್‌ ಕಂಬಗಳು ಮತ್ತು ಪರಿವರ್ತಕಗಳನ್ನು ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ. ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳು, ಸೇತುವೆಗಳ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಳೆಯಿಂದಾಗಿ ಮುಳುಗಡೆಯಾಗುವ ಸಣ್ಣ ಸೇತುವೆಗಳನ್ನು ಎತ್ತರಿಸುವ ಬಗ್ಗೆ ತಾಂತ್ರಿಕ ವರದಿಯನ್ನು ಪಡೆಯಲಾಗುವುದು.

ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಕೊರತೆಯಿರುವುದಿಲ್ಲ. ತುರ್ತು ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 48 ಕೋಟಿ ರೂ. ಅನುದಾನ ಲಭ್ಯವಿದ್ದು, ತಹಶೀಲ್ದಾರ್‌ ಖಾತೆಗಳಲ್ಲೂ ಅನುದಾನ ಲಭ್ಯವಿದೆ. ಅಗತ್ಯ ಬಿದ್ದರೆ ಇನ್ನಷ್ಟು ಪರಿಹಾರವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲೆಯ ಶಾಸಕರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!