Sunday, January 19, 2025
Sunday, January 19, 2025

ಕೋವಿಡ್ ನಿಯಂತ್ರಣ- ಉಡುಪಿ ಸೇರಿದಂತೆ 7 ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ತುರ್ತು ಸಭೆ

ಕೋವಿಡ್ ನಿಯಂತ್ರಣ- ಉಡುಪಿ ಸೇರಿದಂತೆ 7 ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ತುರ್ತು ಸಭೆ

Date:

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಿಬಿಎಂಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು ಈ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು:

* ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.

* ರಾಷ್ಟ್ರ‍ೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ.

* ಕೇರಳ, ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ.

* ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿ.ಸಿ.ಗಳಿಗೆ ಸೂಚನೆ; ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.

* 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ.

* ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ರಿಪೋರ್ಟ್ ಬಂದ ನಂತರದ 7ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ.

* ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರ ಪರೀಕ್ಷೆ ಕಡ್ಡಾಯ.

* ಹೋಟೇಲು, ರೆಸ್ಟೋರೆಂಟ್, ಸಿನೆಮಾ ಹಾಲ್, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯ ಮತ್ತು ಜೈವಿಕ ಉದ್ಯಾನವನಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡೂ ಡೋಸ್ ಪಡೆದಿರಬೇಕು.

* ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಹೆಚ್ಚಳ.

* ಸರ್ಕಾರಿ ಕಚೇರಿ, ಮಾಲ್ ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಸರ್ಕಾರಿ ಕಚೇರಿ, ಮಾಲ್ ಗಳಲ್ಲಿ ಲಸಿಕೆ ನೀಡಲು ವ್ಯವಸ್ಥೆ.

* ಅಂತಾರಾಷ್ಟ್ರ‍ೀಯ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ತೀವ್ರ, ನೆಗೆಟಿವ್ ಇದ್ದವರಿಗೆ ಮಾತ್ರ ನಗರಕ್ಕೆ ಪ್ರವೇಶಕ್ಕೆ ಅನುಮತಿ, ಪಾಸಿಟಿವ್ ಇದ್ದವರು ಚಿಕಿತ್ಸೆಗಾಗಿ ಆಸ್ಪತ್ರೆಗೆ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!