Monday, September 28, 2026
Monday, September 28, 2026

ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Date:

ಬೆಂಗಳೂರು, ಆ.15: 80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದರು.

ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ. ಒಕ್ಕೂಟ ತತ್ವವನ್ನು ಮತ್ತಷ್ಟು ಗಟ್ಟಿಗೊಳಿಸೋಣ. ಸ್ವಾತಂತ್ರ್ಯ ಹೋರಾಟಗಾರರು, ಗಡಿ ಕಾಯುವ ವೀರ ಸೈನಿಕರ ತ್ಯಾಗವನ್ನು ಸ್ಮರಿಸುತ್ತಾ, ಕಾಯಕ, ಸಮಾನತೆ ಮತ್ತು ದಾಸೋಹ ತತ್ವಗಳಡಿ ಸರ್ವರನ್ನೂ ಒಳಗೊಂಡ ಆಡಳಿತ ನೀಡುವ ಸಂಕಲ್ಪ ನಮ್ಮ ಸರ್ಕಾರದ್ದು. ಪಂಡಿತ್‌ ಜವಾಹರಲಾಲ್‌ ನೆಹರೂ ಅವರ ‘ನವ ಭಾರತ’ ಕಲ್ಪನೆಯಂತೆ “ಯುವ ಕರ್ನಾಟಕ – ನವ ಭಾರತ” ಧ್ಯೇಯದೊಂದಿಗೆ, 2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು ರೂ.320 ಲಕ್ಷ ಕೋಟಿಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಆಡಳಿತವನ್ನು ಜನರ ಮನೆಬಾಗಿಲಿಗೆ ತರಲು ‘ಪ್ರಜಾಸೇವೆ ಇಲಾಖೆ’ ಸ್ಥಾಪಿಸಿ, ಸಚಿವರು ಮತ್ತು ಶಾಸಕರಿಂದ ನಿರಂತರ ಪ್ರಜಾಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ.

ಸಾಮಾಜಿಕ ಭದ್ರತೆ ನೀಡುತ್ತಿರುವ ಪಂಚ ಗ್ಯಾರಂಟಿಗಳ ಜೊತೆಗೆ, ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು 6ನೇ ಗ್ಯಾರಂಟಿಯಾಗಿ ‘ಭೂ-ಗ್ಯಾರಂಟಿ’ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ರೂ. 77,000 ಕೋಟಿಗೂ ಅಧಿಕ ಮೊತ್ತ ನೇರ ವರ್ಗಾವಣೆಯಾಗಿದ್ದು, ಎನ್.ಎಫ್.ಎಚ್.ಎಸ್ -6 ವರದಿಯಂತೆ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಶೇ.44 ರಿಂದ ಶೇ.14 ಕ್ಕೆ ಇಳಿಕೆಯಾಗಿದೆ. ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಕೋಟ್ಯಂತರ ಜನರಿಗೆ ಆಸರೆಯಾಗಿವೆ. ಇದು ಕರ್ನಾಟಕ ಮಾದರಿ ಎಂದೇ ಜನಪ್ರಿಯವಾಗಿದೆ ಹಾಗೂ ಇಡೀ ರಾಷ್ಟ್ರ ಅನುಸರಿಸುತ್ತಿದೆ. ತಾಯಂದಿರ ಮರಣ ಪ್ರಮಾಣದಲ್ಲಿ ಶೇ.19 ರಷ್ಟು ಇಳಿಕೆ ಕಂಡಿದೆ.

ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು 72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಖಾಸಗಿ ಉದ್ಯೋಗಕ್ಕಾಗಿ “ಯುವ ಉದ್ಯೋಗ ಸೇತು” ಹಾಗೂ ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗಗಳಿಗೆ ಮಾಸಿಕ ರೂ. 2,500 ಪ್ರೋತ್ಸಾಹಧನ ನೀಡುವ “ಉದ್ಯೋಗ ನಿಧಿ” ಘೋಷಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ 6ನೇ ತರಗತಿಯಿಂದಲೇ ಎಐ ಶಿಕ್ಷಣ, ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಎಐ ವಿಶ್ವವಿದ್ಯಾಲಯ, ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5 ವಿಶೇಷ ಮೀಸಲಾತಿ ಹಾಗೂ 10,000 ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲಾಗುತ್ತಿದೆ.

ರೈತರಿಗಾಗಿ ಡ್ರೋನ್ ಆಧಾರಿತ ಬೆಳೆ ಸಮೀಕ್ಷೆಯ “ಮುಖ್ಯಮಂತ್ರಿ ರೈತ ಚೈತನ್ಯ” ಮತ್ತು ಸಣ್ಣ ರೈತರಿಗೆ ಯಂತ್ರೋಪಕರಣಗಳ ಬಾಡಿಗೆ ಮೇಲೆ 50% ಸಬ್ಸಿಡಿ ನೀಡುವ “ರೈತ ಮಿತ್ರ” ಯೋಜನೆ ಜಾರಿಗೊಳಿಸಲಾಗುವುದು. ಎತ್ತಿನಹೊಳೆ ಯೋಜನೆಯ ಮೊದಲ ಹಂತ ಹಾಗೂ ರೂ.16,000 ಕೋಟಿ ಮೊತ್ತದ ಜಲಸಂಪನ್ಮೂಲ ಯೋಜನೆಗಳು ಚಾಲನೆಯಲ್ಲಿವೆ. ಎಸ್‌ಸಿ/ಎಸ್‌ಟಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕೆ ಬೃಹತ್ ಅನುದಾನ ಮೀಸಲಿಡಲಾಗಿದೆ.

ಬೆಂಗಳೂರಿಗೆ ರೂ.1.50 ಲಕ್ಷ ಕೋಟಿ ಮೂಲಸೌಕರ್ಯ, ರೂ. 26,000 ಕೋಟಿ ವೆಚ್ಚದ 117 ಕಿ.ಮೀ ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’, 5 ಹೊಸ ಪೊಲೀಸ್ ಕಮಿಷನರೇಟ್‌ಗಳು, ಆ್ಯಂಟಿ ರೌಡಿ ಸ್ಕ್ವಾಡ್, ಲಾಲ್‌ಬಾಗ್ ಮಾದರಿಯ 5 ಬೃಹತ್ ಟ್ರೀ ಪಾರ್ಕ್‌ಗಳು ಹಾಗೂ 7 ಕೆರೆಗಳ ಪುನಃಶ್ಚೇತನ ಕೈಗೆತ್ತಿಕೊಳ್ಳಲಾಗಿದೆ. ದೊಡ್ಡಬಳ್ಳಾಪುರದಲ್ಲಿ ರೂ. 20,000 ಕೋಟಿ ವೆಚ್ಚದ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್, ‘ಬಿಯಾಂಡ್ ಬೆಂಗಳೂರು’ ಅಡಿ 5 ಜಿಲ್ಲೆಗಳಲ್ಲಿ ಗ್ಲೋಬಲ್ ಟೆಕ್ ಸೆಂಟರ್‌ಗಳು ಮತ್ತು ‘ಕರ್ನಾಟಕ ರಾಜ್ಯ ಮೋಟಾರು ವಾಹನ ವಿಮಾ ಸಂಸ್ಥೆ’ ಸ್ಥಾಪಿಸಲಾಗುತ್ತಿದೆ. ರಾಜ್ಯದ ಪ್ರತಿಯೊಂದು ಪಟ್ಟಣ ಹಾಗೂ ನಗರದ ಪ್ರಗತಿಗೆ ರಿಂಗ್‌ ರೋಡ್ ಹಾಗೂ ಮೊಬಿಲಿಟಿ ಗ್ರಿಡ್‌ ಗಳನ್ನು ನಗರ ಯೋಜನೆಯ ಮೂಲಕ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!