Tuesday, November 26, 2024
Tuesday, November 26, 2024

ಐದು ವರ್ಷದಿಂದ ಬಿಲ ಸೇರಿದ್ದ ಅನಂತ್ ಕುಮಾರ್ ಹೆಗ್ಡೆ ಈಗ ಹೊರಗೆ ಬಂದಿದ್ದಾರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಐದು ವರ್ಷದಿಂದ ಬಿಲ ಸೇರಿದ್ದ ಅನಂತ್ ಕುಮಾರ್ ಹೆಗ್ಡೆ ಈಗ ಹೊರಗೆ ಬಂದಿದ್ದಾರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಶಿರಸಿ, ಮಾ.7: ಉತ್ತರ ಕನ್ನಡ ಜಿಲ್ಲೆ ಬನವಾಸಿಯ ಐತಿಹಾಸಿಕ ಕದಂಬೋತ್ಸವವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿ ಮಾತನಾಡಿದರು. ನಮ್ಮದು ಬಸವಾದಿ ಶರಣರ, ಸೂಫಿ-ಸಂತರ, ಬುದ್ಧ, ಗಾಂಧಿಯ ನಾಡು. ಆದಿಕವಿ ಪಂಪ “ಮನುಷ್ಯ ಜಾತಿ ತಾನೊಂದೆ ವಲಂ” ಎಂಬ ಮೌಲ್ಯವನ್ನು ಜಗತ್ತಿಗೆ ಸಾರಿದ್ದಾರೆ. ಇದು ನಮ್ಮ ನಾಡಿನ ಸಂಸ್ಕೃತಿ, ಕನ್ನಡ ಸಂಸ್ಕೃತಿಯ ಚಾಲಕ ಶಕ್ತಿ. ಜಾತಿ, ಧರ್ಮದ ಭಾವನೆಗಳನ್ನು ಕೆಣಕಿ ರಾಜಕಾರಣ ಮಾಡಿದರೆ ನಿಮ್ಮ ಬದುಕು ಸುಧಾರಿಸುತ್ತದಾ? ನಾವು ನಿಮ್ಮ ನಂಬಿಕೆ ಮತ್ತು ಭಾವನೆಗಳನ್ನು ಕೆಣಕುವುದಿಲ್ಲ. ಆದರೆ ಜನರ ಬದುಕು ರೂಪಿಸಲು ಕಾರ್ಯಕ್ರಮಗಳನ್ನು ರೂಪಿಸುತ್ತೇವೆ. ಇವನಾರವ ಎನ್ನದೆ, ಇವ ನಮ್ಮವ ಎನ್ನುವ ಮೌಲ್ಯದಲ್ಲಿ ಸರ್ಕಾರದ ಕಾರ್ಯಕ್ರಮ ರೂಪಿಸುತ್ತೇವೆ. ಇವತ್ತಿನ ಸಂಸತ್ತು ಮತ್ತು ವಿಧಾನಸಭೆಯ ಮಾದರಿಯನ್ನು 12ನೇ ಶತಮಾನದಲ್ಲೇ *ಅನುಭವ ಮಂಟಪ* ದ ಮೂಲಕ ವಿಶ್ವಕ್ಕೆ ಬಸವಾದಿ ಶರಣರು ನೀಡಿದ್ದಾರೆ. ನಾಡಿನ ಇಂದಿನ ಯುವ ಪೀಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ ಮತ್ತು ಚರಿತ್ರೆಯನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ಕನ್ನಡ ಸಂಸ್ಕೃತಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಜತೆಗೆ ನಮ್ಮ ಚಾರಿತ್ರಿಕ ಜನ ಜೀವನ ಮತ್ತು ಸಮ ಸಮಾಜದ ಸಾಮಾಜಿಕ ವ್ಯವಸ್ಥೆಯನ್ನು ಅರಿತುಕೊಳ್ಳಲು ಸಾಧ್ಯ.

ನಾವು ನುಡಿದಂತೆ ನಡೆದಿದ್ದೇವೆ. ಆ ಮೂಲಕ ಜನರ ಆಯ್ಕೆಗೆ, ಜನರ ಮತಕ್ಕೆ ಗೌರವ ಕೊಟ್ಟಿದ್ದೇವೆ. ನಮ್ಮ ಸರ್ಕಾರಕ್ಕೆ ನುಡಿದಂತೆ ನಡೆದ ಬಸವಾದಿ ಶರಣರು ಮತ್ತು ಅಂಬೇಡ್ಕರ್, ಬುದ್ಧ ಮತ್ತು ಮಹಾತ್ಮ ಗಾಂಧಿ ಮಾರ್ಗದರ್ಶಕರು. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ಕೊಟ್ಟ ಭರವಸೆಗಳಲ್ಲಿ ಶೇ 99 ರಷ್ಟನ್ನು ಜಾರಿ ಮಾಡಿದ್ದೆ. 2023 ರಲ್ಲಿ ಗೆದ್ದ ಬಳಿಕವೂ ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಈಡೇರಿಸಿ ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿಗಳನ್ನು ಮನೆ ಮನೆಗೆ ತಲುಪಿಸಿದ್ದೇವೆ. ಅಧಿಕಾರ ಮತ್ತು ಸಮಾಜದ ಸಂಪತ್ತು ಕೆಲವರ ಕೈಯಲ್ಲೇ ಕೇಂದ್ರೀಕೃತ ಆಗಬಾರದು ಎನ್ನುವ ಎಲ್ಲಾ ಸಮಾಜ ಸುಧಾರಕರ ಆಶಯದಂತೆ ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಅತ್ಯಂತ ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಇದಕ್ಕಾಗಿ 59,000 ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ. ಗ್ಯಾರಂಟಿ ಹೊರತಾದ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ 1,20,000 ಕೋಟಿ ಖರ್ಚು ಮಾಡುತ್ತಿದ್ದೇವೆ. ಐದು ವರ್ಷದಿಂದ ಬಿಲ ಸೇರಿದ್ದ ಅನಂತ್ ಕುಮಾರ್ ಹೆಗ್ಡೆ ಈಗ ಬಿಲದಿಂದ ಹೊರಗೆ ಬಂದು ವಿಕೃತವಾಗಿ ಮಾತನಾಡುತ್ತಾ ಅವರ ಸಂಸ್ಕೃತಿ ತೋರಿಸುತ್ತಿದ್ದಾರೆ. ಇವತ್ತಿನವರೆಗೂ ಸಂಸತ್ತಿನಲ್ಲಿ ಉತ್ತರ ಕನ್ನಡ ಜನತೆಯ ಪರವಾಗಿ, ರಾಜ್ಯದ ಪರವಾಗಿ ಒಂದೇ ಒಂದಿನ ಮಾತನಾಡಿಲ್ಲ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಶಿವರಾಂ ಹೆಬ್ಬಾರ್, ಶಾಸಕರಾದ ಭೀಮಣ್ಣ ನಾಯಕ್, ಸತೀಶ್ ಸೈಲ್, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!