Monday, January 20, 2025
Monday, January 20, 2025

ಮೇಕೆದಾಟು ಬಗ್ಗೆ ಸರ್ಕಾರದ ನಿಲುವನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಲಿ: ಸಿದ್ಧರಾಮಯ್ಯ

ಮೇಕೆದಾಟು ಬಗ್ಗೆ ಸರ್ಕಾರದ ನಿಲುವನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಲಿ: ಸಿದ್ಧರಾಮಯ್ಯ

Date:

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಬೇಕು. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕೂಡಾ ಬೆಂಬಲಿಸುತ್ತಿದ್ದಾರೆ. ಯಾಕೆ ಈ ದಂದ್ವ ನೀತಿ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಈ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಳೆದಿರುವ ಗಟ್ಟಿ ನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂಬ ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ ಬಿಜೆಪಿ ಭಿನ್ನಾಭಿಪ್ರಾಯ ಹೊಂದಿದ್ದರೆ ಅದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ.

ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯ ಮಾಡಲು ಹೋಗುವುದಿಲ್ಲ, ಯಾವ ಬಗೆಯ ರಾಜಿಯನ್ನೂ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದೆ ಇರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು. ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಟ ಆಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿ ನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು.

ಕಾವೇರಿ ನ್ಯಾಯ ಮಂಡಳಿಯ ತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ. ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷಗಳಲ್ಲಿ ನದಿ ನೀರು ಹಂಚಿಕೆಯಲ್ಲಿ ಯಾವುದೇ ವ್ಯತ್ಯಯವಾಗದೆ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದು ಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ. ಕೆ.ಆರ್.ಎಸ್ ಜಲಾಶಯದಿಂದ ಅನಿಯಂತ್ರಿತವಾಗಿ ಸಮುದ್ರಕ್ಕೆ ಹರಿದುಹೋಗುತ್ತಿರುವ ನೀರಿನಲ್ಲಿ 64 ಟಿಎಂಸಿ ನೀರನ್ನು ಬಳಸಿಕೊಂಡು ರೂಪಿಸಲಾಗಿರುವ ಮೇಕೆದಾಟು ಯೋಜನೆಯ ಮೊದಲ ಪ್ರಸ್ತಾವವವನ್ನು 2013ರಲ್ಲಿ ನಮ್ಮ ಸರ್ಕಾರ ಸಲ್ಲಿಸಿತ್ತು. 2019ರಲ್ಲಿ ನಮ್ಮದೇ ಸಂಯುಕ್ತ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ನಮ್ಮ ಪಕ್ಷ ಈ ಯೋಜನೆಗೆ ಬದ್ಧವಾಗಿದೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವ ಹಾನಿಯೂ ಇಲ್ಲ. ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಒಬ್ಬ ಪ್ರಬುದ್ಧ ರಾಜಕಾರಣಿ. ಅವರು ಹಿಂದಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಬಾರದು. ನೆರೆ ರಾಜ್ಯಗಳ ಜೊತೆ ಸೌಹಾರ್ದಯುತ ಸಂಬಂಧವನ್ನು ಉಳಿಸಿ-ಬೆಳೆಸಿಕೊಂಡು ಹೋಗಬೇಕು. ಮೇಕೆದಾಟು ಮೂಲಭೂತವಾಗಿ ಬೆಂಗಳೂರು-ಮೈಸೂರು ನಗರಗಳಿಗಾಗಿ ರೂಪಿಸಿರುವ ಕುಡಿಯುವ ನೀರಿನ ಯೋಜನೆ. ಬೆಂಗಳೂರಿನಲ್ಲಿ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು ಭಾಷಿಕರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ಜನರಿದ್ದಾರೆ. ಇಂತಹ ಕುಡಿಯುವ ನೀರು ಪೂರೈಸುವ ಯೋಜನೆಗೆ ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುವುದು ಸರಿ ಅಲ್ಲ.

ತಮಿಳುನಾಡು ಸರ್ಕಾರ ಕೂಡ ಕಾವೇರಿ ಜಲಾನಯನ ಪ್ರದೇಶದಲ್ಲಿ ಎರಡು ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದೆ. ಅವುಗಳನ್ನು ಕರ್ನಾಟಕ ವಿರೋಧಿಸಿಲ್ಲ. ಪ್ರಾಕೃತಿಕ ಸಂಪತ್ತನ್ನು ಹಂಚಿಕೊಂಡು ಬೆಳೆಯಬೇಕು ಎನ್ನುವುದು ನಮ್ಮ ನಿಲುವು. ತಮಿಳುನಾಡು ಹಟ ಹಿಡಿದು ಮೇಕೆದಾಟು ಯೋಜನೆಯನ್ನು ವಿರೋಧಿಸಿದರೆ ರಾಜಕೀಯ ಸಂಘರ್ಷ ಅನಿವಾರ್ಯವಾಗಬಹುದು ಎಂದು ಸಿದ್ಧರಾಮಯ್ಯ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!