Friday, April 3, 2026
Friday, April 3, 2026

17 ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

17 ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ೧೭ನೇ ಬಜೆಟ್ ಮಂಡಿಸಿದರು. 2026-27ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಅವರು ಹೇಳಿದರು.

ಬಜೆಟ್ ಮುಖ್ಯಾಂಶಗಳು?: ಶ್ರೀ ಮಾತಾ ವೈಷ್ಟೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವವರಿಗೆ ತಲಾ 5,000 ರೂ. ಸಹಾಯಧನ. 259 ಕಲ್ಯಾಣಿಗಳನ್ನು 3 ವರ್ಷಗಳಲ್ಲಿ ಪುನರುಜ್ಜಿವನಗೊಳಿಸಲು ‘ ಜಲ ನಿಧಿ ಕಲ್ಯಾಣಿಗಳ ಪುನಃಶ್ಚತನ ಯೋಜನೆ’ ಜಾರಿ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ’ ಮತ್ತು ‘ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ’ ಗಳಿಗೆ ಮೂಲಭೂತ ಸೌಲಭ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಅಭಿವೃದ್ಧಿ ಪ್ರಾಧಿಕಾರಗಳ ರಚನೆ. ಬೆಂಗಳೂರು ನಗರದ ಹೃದಯ ಭಾಗವಾದ ಕೆಂಪೇಗೌಡ ವೃತ್ತದಲ್ಲಿರುವ ಬಂಡಿಶೇಷಮ್ಮ ಛತ್ರದ ಜಾಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿ ನಿಲಯ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಾಣ. ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ‘ಸಮಗ್ರ ಕರಾವಳಿ ಅಭಿವೃದ್ಧಿ ಯೋಜನೆ’ ಜಾರಿ. ಪ್ರವಾಸ ಮಾರ್ಗದರ್ಶಕರಿಗೆ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯ ತರಬೇತಿ ನೀಡಲು ಡಿಪ್ಲೋಮಾ ಪ್ರಾರಂಭ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮುಳ್ಳಯ್ಯನಗಿರಿ – ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್-ವೇ ನಿರ್ಮಾಣ. ರಾಜ್ಯದ ಸಂರಕ್ಷಿತ 844 ಸ್ಮಾರಕಗಳ ಹಾಗೂ 1,000 ಅಸುರಕ್ಷಿತ ಸ್ಮಾರಕಗಳ ರಕ್ಷಣೆ ಮಾಡುವ ಹಿತದೃಷ್ಟಿಯಿಂದ 1,000 ಸ್ಮಾರಕ ಮಿತ್ರರನ್ನು ಗುರುತಿಸಿ ತರಬೇತಿ. ಇವರುಗಳನ್ನು ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಕ್ರಮ. ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್‌ ದರ 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಳ. ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್ ಸ್ಥಾಪನೆ. ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ವಿದೇಶಿ ವಿನಿಮಯ ಕೌಂಟರ್‌ಗಳಲ್ಲಿ ಭಾರತೀಯ ರೂಪಾಯಿ ವಿನಿಮಯಕ್ಕೆ ಆರ್‌ಬಿಐ ಅವಕಾಶ

ಮುಂಬಯಿ, ಏ.3: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ನಿರ್ಗಮನ ಸಭಾಂಗಣಗಳಲ್ಲಿರುವ ವಿದೇಶಿ ವಿನಿಮಯ...

ಏ.3: ‘ಬನ್ನಂಜೆ ಒಡೆಯ ಮಹಾಲಿಂಗೇಶ್ವರ’ ಧ್ವನಿಸುರುಳಿ ಬಿಡುಗಡೆ

ಉಡುಪಿ, ಏ.2: ಏಪ್ರಿಲ್ 3 ಶುಕ್ರವಾರದಂದು ಬೆಳಿಗ್ಗೆ 10.00 ಗಂಟೆಗೆ ಬನ್ನಂಜೆ...

ಪೊಲೀಸ್ ಧ್ವಜ ದಿನಾಚರಣೆ

ಉಡುಪಿ, ಏ.2: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ...

ಸಾಮರ್ಥ್ಯ ಅಭಿವೃದ್ದಿಗೆ ಕ್ರೀಡೆ ಸಹಕಾರಿ: ಡಾ. ರಾಮಚಂದ್ರ ಪಾಟ್ಕರ್

ಶಂಕರನಾರಾಯಣ, ಏ.2: ಕ್ರೀಡೆಗಳು ಕೇವಲ ದೈಹಿಕ ಆರೋಗ್ಯವಷ್ಟೇ ಅಲ್ಲದೆ ಶಿಸ್ತಿನ, ಸಹಕಾರದ...
error: Content is protected !!