Sunday, October 11, 2026
Sunday, October 11, 2026

ಆ. 12: ಮುಖ್ಯಮಂತ್ರಿ ಬೊಮ್ಮಾಯಿ ಉಡುಪಿ ಪ್ರವಾಸ

ಆ. 12: ಮುಖ್ಯಮಂತ್ರಿ ಬೊಮ್ಮಾಯಿ ಉಡುಪಿ ಪ್ರವಾಸ

Date:

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಆಗಸ್ಟ್ 12, ಗುರುವಾರ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದು, ಮಧ್ಯಾಹ್ನ ಗಂಟೆ 3.00ಕ್ಕೆ ಅವರನ್ನು ಉಡುಪಿ ಜಿಲ್ಲಾ ವ್ಯಾಪ್ತಿಯ ಹೆಜಮಾಡಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಗುವುದು.

ಮುಖ್ಯಮಂತ್ರಿಗಳು ಮಧ್ಯಾಹ್ನ 3.30ಕ್ಕೆ ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ, ಸಂಜೆ 4.00ಕ್ಕೆ ಉಡುಪಿ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕೋವಿಡ್ ಕುರಿತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳಿಗೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಗೌರವಾರ್ಪಣೆ ನಡೆಯಲಿದೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಸಂಜೆ 6.15ಕ್ಕೆ ಉಡುಪಿ ಶ್ರೀ ಕೃಷ್ಣ ಮಠ ಸಂದರ್ಶನಗೈದು ಸ್ವಾಮೀಜಿಯವರ ದರ್ಶನ ಪಡೆದು ರಾತ್ರಿ 7.00ಕ್ಕೆ ನಿರ್ಗಮಿಸಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...

ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರರಿಗೆ ಹಾಗೂ ಪರಿಚಾರಕರಿಗೆ ಗೌರವ ಸನ್ಮಾನ

ಕಟಪಾಡಿ, ಅ.11: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಎಸ್.ಸಿ ಮೋರ್ಚಾದ...

ಪೆರ್ಣಂಕಿಲ ಜಡ್ಡುಕೆರೆ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕಾಪು, ಅ.11: ಕೋಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಜಡ್ಡುಕೆರೆ ರಸ್ತೆ...

ಕೊಡವೂರು ಲಕ್ಷದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಡವೂರು, ಅ.11: ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವದ...
error: Content is protected !!