ಬೆಂಗಳೂರು: ಫೆ.16ರಿಂದ ಪಿಯು, ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಾಲೇಜು ಪುನರಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮಾಡಿದ್ದಾರೆ.