Monday, August 31, 2026
Monday, August 31, 2026

ಸಮವಸ್ತ್ರ ನಿಯಮ- ನಿಲುವು ಸ್ಪಷ್ಟಪಡಿಸಿದ ರಾಜ್ಯ ಸರ್ಕಾರ

ಸಮವಸ್ತ್ರ ನಿಯಮ- ನಿಲುವು ಸ್ಪಷ್ಟಪಡಿಸಿದ ರಾಜ್ಯ ಸರ್ಕಾರ

Date:

ಉಡುಪಿ: ಶೈಕ್ಷಣಿಕ ಕ್ಷೇತ್ರದ ಸಮವಸ್ತ್ರ ನಿಯಮದ ಕುರಿತಂತೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ಶಾಲಾ, ಕಾಲೇಜುಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರದ ನಿಯಮಗಳನ್ನು ಪಾಲಿಸುವಂತೆ ಆದೇಶ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ಶಾಸಕ ಕೆ. ರಘುಪತಿ ಭಟ್ ಕೃತಜ್ಞತೆ ಸಲ್ಲಿಸಿದ್ದಾರೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983 ನಿಯಮದನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸತಕ್ಕದ್ದು, ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧರಿಸುವಂತಹ ಸಮವಸ್ತ್ರವನ್ನು ಧರಿಸತಕ್ಕದ್ದು ಎಂಬ ಆದೇಶ ನೀಡಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿಯ ನಿರ್ಧರಿಸುವಂತಹ ಸಮವಸ್ತ್ರಗಳನ್ನು ಧರಿಸುವುದು. ಆಡಳಿತ ಮಂಡಳಿಗಳು ಸಮವಸ್ತ್ರಗಳನ್ನು ನಿಗದಿಪಡಿಸದೆ ಇದ್ದಲ್ಲಿ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸುವ ತಕ್ಕದ್ದು ಎಂದು ಸರ್ಕಾರ ಆದೇಶಿಸಿದೆ. ಸಮವಸ್ತ್ರದ ಕುರಿತು ಗೊಂದಲ ನಿವಾರಿಸಿದ ರಾಜ್ಯ ಸರ್ಕಾರಕ್ಕೆ ಶಾಸಕ ಭಟ್ ಧನ್ಯವಾದ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!