ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸರಳ ರೀತಿಯಲ್ಲಿ ಆಚರಣೆ ಮಾಡಲು ರಾಜ್ಯ ಸರಕಾರ ಅನುಮತಿ ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೊರೊನಾ ಸಾಂಕ್ರಾಮಿಕ ತಡೆಗಟ್ಟುವ ಕುರಿತು ತಜ್ಞರೊಂದಿಗೆ ಇಂದು ನಡೆದ ಮಹತ್ವದ ಸಭೆಯ ಬಳಿಕ ಸುದ್ಧಿಗಾರರ ಜೊತೆಗೆ ಮಾತನಾಡಿದ ಸಚಿವ ಆರ್ ಅಶೋಕ್, ಈ ಕುರಿತು ಮಾಹಿತಿ ನೀಡಿದರು.
ಸಾರ್ವಜನಿಕ ಗಣೇಶೋತ್ಸವ ಆಚರಣೆ ಬಗ್ಗೆ ನಿಯಮಗಳ ಮುಖ್ಯಾಂಶಗಳು:
* ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.
* ಡಿಜೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
* 50 X 50 ಪೆಂಡಾಲುಗಳಿಗೆ ಮಾತ್ರ ಅವಕಾಶ.
* ಸೂಚಿಸಿದ ಸ್ಥಳಗಳಲ್ಲಿ ವಿಸರ್ಜನೆ ಮಾಡಬಹುದು. ಆದರೆ ಈ ಸಂದರ್ಭದಲ್ಲಿ ಯಾವುದೇ ಮೆರವಣಿಗೆ ನಡೆಸುವಂತಿಲ್ಲ, ಜನ ಸೇರಿಸುವಂತಿಲ್ಲ.
* ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರಬೇಕು. ಸ್ಥಳದಲ್ಲಿಯೇ ಲಸಿಕಾಕರಣ ನಡೆಸುವ ವ್ಯವಸ್ಥೆ ಮಾಡಲು ಅನುಮತಿ ಇದೆ.
* ಶಾಲಾ ಕಾಲೇಜುಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ.
* ಗಡಿ ಜಿಲ್ಲೆಗಳಲ್ಲಿ ಶೇ. 2 ಕ್ಕಿಂತ ಕಡಿಮೆ ಪಾಸಿಟಿವಿಟಿ ಇದ್ದರೆ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ.
* ಶೇ. 2 ಕ್ಕಿಂತ ಹೆಚ್ಚು ಪಾಸಿಟಿವಿಟಿ ಇರುವ ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶವಿಲ್ಲ.